ನವದೆಹಲಿ:ಬಿಜೆಪಿಯ ಮಾಜಿ ವಕ್ತಾರ ನೂಪುರ್ ಶರ್ಮಾ ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬೆಂಬಲಿಸಿದ್ದಕ್ಕಾಗಿ ಟೈಲರ್ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದ ಮಾಡಿದ ಪ್ರಕರಣದಲ್ಲಿ ಆರೋಪಿ ಮೊಹಮ್ಮದ್ ಜಾವೇದ್‌ಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದೆ.
ಇದನ್ನೂ ಓದಿ:ಶಾಸಕನ ರಾಸಲೀಲೆ ವಿಡಿಯೋ ವೈರಲ್..ಪೆನ್​ಡ್ರೈವ್​ ರೆಕಾರ್ಡ್​ ಇದೆಯೆಂದು ಹೆದರಿಸಿ ಲೈಂಗಿಕ ದೌರ್ಜನ್ಯ ಎಂದ ಸಂತ್ರಸ್ತೆ!
ಮೊಹಮ್ಮದ್ ಜಾವೇದ್‌ಗೆ 2 ಲಕ್ಷ ರೂಪಾಯಿ, ಮತ್ತು 1 ಲಕ್ಷ ರೂಪಾಯಿಯ ಶ್ಯೂರಿಟಿ ಪಡೆದು ಮೇಲೆ ರಾಜಸ್ಥಾನ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ. ನ್ಯಾಯಮೂರ್ತಿ ಪಂಕಜ್ ಭಂಡಾರಿ ಮತ್ತು ನ್ಯಾಯಮೂರ್ತಿ ಪ್ರವೀರ್ ಭಟ್ನಾಗರ್ ಅವರಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಜಾವೇದ್ ರಾಜೀ ನೆಪದಲ್ಲಿ ಗೂಂಡಾಗಿರಿ ನಡೆಸಿದ ಆರೋಪ ಹೊರಿಸಲಾಗಿತ್ತು.
ಪ್ರಮುಖ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಅಟ್ಟಾರಿ ಮತ್ತು ಘೌಸ್ ಮೊಹಮ್ಮದ್ 2022ರಲ್ಲಿ ಗ್ರಾಹಕರಂತೆ ನಟಿಸಿ ಕನ್ಹಯ್ಯಾ ಲಾಲ್ ಅಂಗಡಿಗೆ ತೆರಳಿ ಅವರನ್ನು ಹಾಡಹಗಲೇ ತಲೆ ಕಡಿದು ಬರ್ಬರವಾಗಿ ಕೊಂದಿದ್ದರು. ಅವರ ಬಂಧನಕ್ಕೆ ಕೆಲವೇ ಗಂಟೆಗಳ ಮೊದಲು ಬಿಡುಗಡೆ ಮಾಡಿದ ವೀಡಿಯೊದಲ್ಲಿ, ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪ ಹೊತ್ತಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ಕನ್ಹಯ್ಯ ಅವರನ್ನು ಕೊಂದಿದ್ದೇವೆ ಎಂದು ಅವರು ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಕ್ರೂರ ಹತ್ಯೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿದ್ದರು.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಜುಲೈ 22, 2022 ರಂದು ಉದಯಪುರದಿಂದ ಜಾವೇದ್‌ನನ್ನು ಬಂಧಿಸಿತ್ತು. ಟಿವಿ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ಮಾಜಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ನೂಪುರ್ ಶರ್ಮಾ ಅವರ ವಿವಾದಾತ್ಮಕ ಹೇಳಿಕೆಗಳನ್ನು ಬೆಂಬಲಿಸಿದ ಆರೋಪದ ಮೇಲೆ ಜೂನ್ 28, 2022 ರಂದು ದರ್ಜಿ ಕನ್ಹಯ್ಯಾ ಲಾಲ್ ಅವರನ್ನು ಉದಯಪುರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಅಧಿಕ ಲಾಭದ ಹೆಸರಿನಲ್ಲಿ ವಂಚನೆ.. ಅಸ್ಸಾಂನಲ್ಲಿ ಬೆಳಕಿಗೆ ಬಂತು 2200 ಕೋಟಿ ಹಗರಣ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 4 =
Remember me
