ನವದೆಹಲಿ:ಹಿಂದೂ ದೇವರನ್ನು ಹೀಯಾಳಿಸಿದವರ ವಿರುದ್ಧ ಕಿಡಿಕಾರಿ ಪ್ರವಾದಿ ಮೊಹಮ್ಮದ್​ ವಿರುದ್ಧ ಮಾತನಾಡಿ ಭಾರಿ ವಿವಾದಕ್ಕೆ ಒಳಗಾಗಿದ್ದ ಬಿಜೆಪಿ ನಾಯಕಿ ನೂಪುರ್​ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದ ರಾಜಸ್ಥಾನದ ಉದಯಪುರದ ಟೈಲರ್​ ಕನ್ಹಯ್ಯಾಲಾಲ್​ ರುಂಡ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್​ಐಎ)ದ ವಿಶೇಷ ನ್ಯಾಯಾಲಯ ಆರೋಪಿಯೊಬ್ಬನಿಗೆ ಜಾಮೀನು ನೀಡಿದೆ. ಫರ್ಹಾದ್ ಮೊಹಮ್ಮದ್ ಅಲಿಯಾಸ್ ಬಬ್ಲಾ ಎಂಬಾತನಿಗೆ ಜಾಮೀನು ಮಂಜೂರಾಗಿದೆ. ಈ ಆರೋಪಿ ವಿರುದ್ಧ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಯಾವುದೇ ಆರೋಪವಿಲ್ಲ ಎಂದು ಜಾಮೀನು ಮಂಜೂರು ಮಾಡಿದ್ದ ನ್ಯಾಯಾಧೀಶ ರವೀಂದ್ರ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ:ಈಕೆಯ ಕೈ ಸ್ಕ್ಯಾನ್ ಮಾಡಿದ್ರೆ ಸಾಕು ಹಣ ಕಳಿಸಿಕೊಡಬಹುದು; ಇದಕ್ಕಿಂತ ‘ಡೈರೆಕ್ಟ್ ಟ್ರಾನ್ಸ್​ಫರ್’​ ಅಸಾಧ್ಯ ಅನಿಸುತ್ತೆ!
ಶಸ್ತ್ರಾಸ್ತ್ರ ಕಾಯ್ದೆಯಡಿ ಮಾತ್ರ ಆತನ ಮೇಲೆ ಆರೋಪ ಹೊರಿಸಲಾಗಿತ್ತು. ಆರೋಪಿ ಜುಲೈ 2022ರಿಂದ ಜೈಲಿನಲ್ಲಿದ್ದು, ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಜಾಮೀನು ಪ್ರಯೋಜನ ನೀಡಲಾಗುತ್ತದೆ ಎಂದು ನ್ಯಾಯಾಧೀಶರು ಹೇಳಿದರು.
ಇದನ್ನೂ ಓದಿ:ಟೈಲರ್ ರುಂಡ ಕತ್ತರಿಸಿದ ಪುಂಡರಿಬ್ಬರ ಬಂಧನ; ತನಿಖೆಗಾಗಿ ಹತ್ತು ತಂಡಗಳ ರಚನೆ
ಕಳೆದ ವರ್ಷ ಜೂ. 28ರಂದು ರಾಜಸ್ಥಾನದ ಉದಯಪುರದ ಮಲ್ಡಾಸ್ ಸ್ಟ್ರೀಟ್​ನಲ್ಲಿರುವ ಟೈಲರಿಂಗ್ ಅಂಗಡಿಯೊಳಕ್ಕೆ ಬಂದಿದ್ದ ದುಷ್ಕರ್ಮಿಗಳು ಕನ್ಹಯ್ಯಾಲಾಲ್ ಮೇಲೆ ದಾಳಿ ಮಾಡಿ ಹಲ್ಲೆಗೈದು, ರುಂಡ ಕತ್ತರಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.
ಪೊಲೀಸ್ ‘ಪೋಸ್ಟ್​’ಗಳಲ್ಲೂ ಕ್ರಿಯೇಟಿವಿಟಿ; ಇಂಪ್ರೆಸ್​ ಆಗುವಂತೆ ‘ಎಕ್ಸ್​’ಪ್ರೆಸ್ ಮಾಡುತ್ತಿರುವ ಪೊಲೀಸರು!

ಕೋಚಿಂಗ್​ಗೆ ತೆರಳುವ ಮಕ್ಕಳೊಂದಿಗೆ ಮನೆ ಬಿಡುತ್ತಿರುವ ತಂದೆ-ತಾಯಿ, ಅಜ್ಜ-ಅಜ್ಜಿ; ಕಾರಣ ಭಯಾನಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − 4 =
Remember me
