ಕೌಲಾಲಂಪುರ್:ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಏಷ್ಯಾ ಘಟಕದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್​ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಈ ಹಿಂದೆ ಬಾಸ್ಕೆಟ್‌ಬಾಲ್ ಫೆಡರೇಶನ್ ಆಫ್ ಇಂಡಿಯಾ(BFI) ಅಧ್ಯಕ್ಷರಾಗಿದ್ದ ಕೆ. ಗೋವಿಂದರಾಜ್ ಅವರು ಇದೀಗ (FIBA) ಅಂತರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಏಷ್ಯಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ಕನ್ನಡಿಗರಾಗಿದ್ದಾರೆ.
ಇಂದು ಬೆಳಗ್ಗೆ ಮಲೇಷಿಯಾದ ಕೌಲಾಲಂಪುರದಲ್ಲಿ ನಡೆದ ಫಿಬಾ 2023 ಏಷ್ಯಾ ಸಾಮಾನ್ಯ ಸಭೆಯಲ್ಲಿ ಗೋವಿಂದರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು 2023 ರಿಂದ 2027ರವರೆಗೆ ಅಧಿಕಾರದಲ್ಲಿರಲಿದ್ದಾರೆ.
ಫಿಬಾ ಅಧಿಕಾರ ಹಂಚಿಕೆ ನೀತಿಯ ಪ್ರಕಾರ ಮುಂದಿನ ಅಧ್ಯಕ್ಷರು ಸೌತ್ ಏಷ್ಯನ್ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ವಲಯದವರೇ ಆಗಬೇಕಿತ್ತು. ಹೀಗಾಗಿ ಗೋವಿಂದರಾಜ್ ಅವರಿಗೆ ಅವಕಾಶ ಒದಗಿಬಂದಿದೆ. ಅಂತರರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್​ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್​​ ಅವರು ನೇಮಕಗೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ.
ಒಂದೇ ತಿಂಗಳಲ್ಲಿ ಎರಡು ಬಾರಿ ಗರ್ಭಿಣಿ; ಅಚ್ಚರಿ ಎನಿಸಿದರೂ ಇದು ಸತ್ಯ..!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 7 =
Remember me
