ಉತ್ತರಪ್ರದೇಶ:ಯುವತಿಯೊಬ್ಬಳು ಪ್ರಿಯಕರನ ತಂದೆಯೊಂದಿಗೆ ಓಡಿ ಹೋಗಿರುವ ವಿಚಿತ್ರ ಪ್ರೇಮ ಪ್ರಕರಣವೊಂದು ವರದಿಯಾಗಿದೆ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಕಾನ್ಪುರದಲ್ಲಿ.
20 ವರ್ಷದ ಯುವತಿ ಕಳೆದ ವರ್ಷ ತನ್ನ ಪ್ರಿಯಕರ ಅಮಿತ್ ಮನೆಗೆ ಬಂದಿದ್ದಾಳೆ. ಈ ವೇಳೆ ಪ್ರಿಯಕರನ ತಂದೆ ಕಮಲೇಶ್ ಎಂಬುವರ ಪರಿಚಯವಾಗಿದ್ದು, ಇಬ್ಬರೂ ಮಾತನಾಡಲು ಪ್ರಾರಂಭಿಸಿದ್ದಾರೆ. ಬಳಿಕ ಯಾರಿಗೂ ಗೊತ್ತಾಗದಂತೆ ಕಳೆದ ವರ್ಷ ಮನೆಯಿಂದ ಓಡಿ ಹೋಗಿ ತಲೆ ಮರೆಸಿಕೊಂಡಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ:ತಮ್ಮನಿಗೆ ಪತ್ನಿಯ ತಂಗಿಯನ್ನು ಮದುವೆ ಮಾಡಿ ಕೊಟ್ಟಿಲ್ಲವೆಂದು ಹೆಂಡತಿಯ ಜೀವ ತೆಗೆದ ಗಂಡ!
ಕಾಣೆಯಾಗಿರುವ ಬಗ್ಗೆ ಯುವತಿಯ ಮನೆಯವರು ಚಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಇದೀಗ ಕಳೆದ ಮಾರ್ಚ್ 20 ರಂದು ಓಡಿ ಹೋಗಿದ್ದ ಜೋಡಿಯನ್ನು ದೆಹಲಿಯಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ.
ಕಾನ್ಪುರದಿಂದ ಓಡಿ ಬಂದ ಈ ಜೋಡಿ ಸುಮಾರು ಒಂದು ವರ್ಷಗಳಷ್ಟು ಕಾಲ ದೆಹಲಿಯಲ್ಲಿ ವಾಸವಾಗಿದ್ದರು. ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಸದ್ಯ ಇಬ್ಬರನ್ನೂ ವಶಕ್ಕೆ ಪಡೆದುಕೊಂಡಿದ್ದು, ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್)
ಇದನ್ನೂ ಓದಿ:ಪದವಿ ವ್ಯಾಸಂಗ ಮುಗಿದರೂ ಸಿಗದ ಉದ್ಯೋಗ; ಮನನೊಂದು ಪ್ರಾಣಬಿಟ್ಟ ಯುವಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
