ನವದೆಹಲಿ:ದೇಶಾದ್ಯಂತ ತೀವ್ರ ಖಂಡನೆಗೆ ಗುರಿಯಾಗಿರುವ ಆರ್.​ಜಿ. ಕರ್​ ಮೆಡಿಕಲ್​ ಕಾಲೇಜಿನ ಟ್ರೈನಿ ವೈದ್ಯೆ ಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ದೇಶಾದ್ಯಂತ ಪ್ರತಿಭಟನೆಗಳು ಮುಂದುವರೆದಿವೆ. ಇತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ​ ವಿಚಾರಣೆ ನಡೆಸುತ್ತಿದ್ದು, ವಿಚಾರಣೆಯ ಸಂದರ್ಭದಲ್ಲಿ ಹಿರಿಯ ವಕೀಲ ಕಪಿಲ್​ ಸಿಬಲ್​ ನಕ್ಕಿರುವುದು ಎಲ್ಲರ ಅಸಮಾಧಾನಕ್ಕೆ ಕಾರಣವಾಗಿದೆ.
ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​ ನಡೆಸುತ್ತಿರುವ ವಿಚಾರಣಗೆ ಸಂಬಂಧಿಸಿದಂತೆ ಕಪಿಲ್​ ಸಿಬಲ್​ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುತ್ತಿದ್ದು, ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ಅವರು ಸಿಬಿಐ ಪರವಾಗಿ ವಾದಿಸುತ್ತಿದ್ದಾರೆ.
ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್ (SCBA) ಅಧ್ಯಕ್ಷ ಕಪಿಲ್​ ಸಿಬಲ್ ಮತ್ತು ತುಷಾರ್​ ಮೆಹ್ತಾ ನಡುವೆ ವಾದ ನಡೆಯುತ್ತಿರುವ ವೇಳೆ ಹಿರಿಯ ವಕೀಲರು ನಕ್ಕ ಘಟನೆ ನಡೆದಿದೆ. ಸರ್ಕಾರಿ ವಕೀಲರು ಪೊಲೀಸರಿಂದ ಎಫ್‌ಐಆರ್‌ನ ದಾಖಲಾತಿಯಲ್ಲಿನ ಅಂತರದ ಬಗ್ಗೆ ನ್ಯಾಯಾಲಯಕ್ಕೆ ವಿವರಿಸುತ್ತಿದ್ದರು. ಈ ವೇಳೆ ಕಪಿಲ್​ ಸಿಬಲ್​ ನಕ್ಕಿದ್ದಾರೆ.
Complete insensitivity on display. Like Mamata Banerjee, the legal team representing WB Govt, led by former Congressman Kapil Sibal, showed no remorse, whatsoever, for having killed the young doctor twice…Solicitor General Tushar Mehta had to remind Kapil Sibal ‘not to laugh’.pic.twitter.com/bwtJBqeSBb
ಇದನ್ನೂ ಓದಿ:VIDEO| ಜನನಿಬಿಡ ರಸ್ತೆಯಲ್ಲಿ ಕಂತೆ ಕಂತೆ ನೋಟು ಬಿಸಾಡಿದ ವ್ಯಕ್ತಿ! ದುಡ್ಡಿಗಾಗಿ ಮುಗಿಬಿದ್ದ ಸ್ಥಳೀಯರು
ಕಪಿಲ್​ ಸಿಬಲ್​ ನಕ್ಕಿದ್ದರಿಂದ ಕುಪಿತಗೊಂಡ ತುಷಾರ್ ಮೆಹ್ತಾ ಒಂದು ಹುಡುಗಿ ತನ್ನ ಪ್ರಾಣವನ್ನು ಅತ್ಯಂತ ಅಮಾನವೀಯ ರೀತಿಯಲ್ಲಿ ಕಳೆದುಕೊಂಡಿದ್ದಾಳೆ. ಇಲ್ಲಿ ವ್ಯಕ್ತಿ ಸತ್ತಿದ್ದಾರೆ ನಗಬೇಡಿ ಎಂದು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಇತ್ತ ಈ ವಿಡಿಯೋವನ್ನು ಪೋಸ್ಟ್​ ಮಾಡಿ ಕಿಡಿಕಾರಿರುವ ಬಿಜೆಪಿ ನಾಯಕ ಅಮಿತ್​ ಮಾಳವೀಯ, ಮಾಜಿ ಕಾಂಗ್ರೆಸ್ಸಿಗ ಕಪಿಲ್ ಸಿಬಲ್ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುವ ಕಾನೂನು ತಂಡ ಮಮತಾ ಬ್ಯಾನರ್ಜಿ ಅವರಂತೆಯೇ ಇದೆ. ವೈದ್ಯೆಯನ್ನು ಎರಡು ಬಾರಿ ಕೊಂದಿದ್ದಕ್ಕಾಗಿ ಯಾವುದೇ ಪಶ್ಚಾತ್ತಾಪವನ್ನು ತೋರಿಸಲಿಲ್ಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕಪಿಲ್ ಸಿಬಲ್ ಅವರಲ್ಲಿ ನಗಬೇಡಿ ಎಂದು ನೆನಪಿಸಬೇಕಾಗಿ ಬಂತು ಎಂದು ಟ್ವೀಟ್​ ಮಾಡಿ ಕಿಡಿಕಾರಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:7 + 14 =
Remember me
