Weather update 19-09-2023: ರಾಜ್ಯದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದು, ಇಂದಿನಿಂದ ಮೂರುನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಹಿನ್ನೆಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ ಹವಾಮಾನ ಇಲಾಖೆ ಎಚ್ಚರಿಸಿದೆ.
ಹಾಸನ ಚಿಕ್ಕಮಗಳೂರಿನ , ಶಿವಮೊಗ್ಗ ,ವಿಜಯಪುರ, ಯಾದಗಿರಿಯ, ರಾಯಚೂರು, ಚಿತ್ರದುರ್ಗ, ತುಮಕೂರಿನ, ರಾಮನಗರ, ಚಾಮರಾಜಗರ ಮತ್ತುನ ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆ ಸಾಧ್ಯತೆಯಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದದ್ದು, ಗುಡುಗು ಸಹಿತ ಮಳೆಯಾಗುಗವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ.
ರಾಜ್ಯದ ಕೆಲವೆಡೆ ಉಷ್ಣಾಂಶದಲ್ಲಿ ಬದಲಾವಣೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಅಂದರೆ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + one =
Remember me
