ಬೆಂಗಳೂರು:ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಪ್ರಮಾಣದಲ್ಲಿ ಇಳಿಮುಖವಾಗುತ್ತಿದೆ. ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 18 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಹಿಂದಿನ ದಿನಗಳಿಗೆ ಹೋಲಿಸಿದರೆ ಇದು ಕಡಿಮೆ ಸಂಖ್ಯೆಯಾಗಿದೆ.ಆದರೆ ವಿಜಯಪುರದಲ್ಲಿ 11 ಹಾಗೂ ಕಲಬುರಗಿಯಲ್ಲಿ 5 ಹೊಸ ಪ್ರಕರಣಗಳು ಒಂದೇ ದಿನ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಅದನ್ನು ಹೊರತುಪಡಿಸಿದರೆ, ಗದಗ ಹಾಗೂ ಬೀದರ್‌ನಲ್ಲಿ ತಲಾ ಒಂದು ಹೊಸ ಪ್ರಕರಣಗಳು ಪತ್ತೆಯಾಗಿವೆ.ಇಲ್ಲಿಯವರೆಗೆ ಕರೊನಾ ಸೋಂಕಿತರ ಸಂಖ್ಯೆ 408 ಆಗಿದ್ದು, ಈ ಪೈಕಿ 112 ಮಂದಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. 16 ಮಂದಿ ಮೃತಪಟ್ಟಿದ್ದರೆ. ಒಬ್ಬ ಗರ್ಭಿಣಿ ಸೇರಿದಂತೆ 278 ಮಂದಿ ಸಾಮಾನ್ಯ ವಾರ್ಡ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇಬ್ಬರು ಐಸಿಯುನಲ್ಲಿ ಇದ್ದಾರೆ.ನಿಮ್ಮ ಜಿಲ್ಲೆಯಲ್ಲಿ ಎಷ್ಟು?:ಇಲ್ಲಿಯವರೆಗೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು ಪತ್ತೆಯಾಗಿದ್ದು, ಎಷ್ಟು ಬಿಡುಗಡೆಯಾಗಿವೆ, ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬುದು ಇಲ್ಲಿ ಉಲ್ಲೇಖಗೊಂಡಿದೆ. ಇಲ್ಲಿ ಹೆಸರು ಇಲ್ಲದಿರುವ ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳು ವರದಿಯಾಗಿಲ್ಲ.ಬಾಗಲಕೋಟೆ:21 ಸೋಂಕಿತರು ಪತ್ತೆಯಾಗಿದ್ದು, 20 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.ಬಳ್ಳಾರಿ:13 ಮಂದಿ ಸೋಂಕಿತರಿದ್ದು ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಳಗಾವಿ:42 ಮಂದಿ ಸೋಂಕಿತರಿದ್ದು 41 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.ಬೆಂಗಳೂರು ಗ್ರಾಮಾಂತರ:12 ಮಂದಿಗೆ ಸೋಂಕು ತಗುಲಿದ್ದು 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3 ಮಂದಿ ಬಿಡುಗಡೆಯಾಗಿದ್ದಾರೆ.ಬೆಂಗಳೂರು ನಗರ:89 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 45 ಮಂದಿ ಬಿಡುಗಡೆಯಾಗಿದ್ದಾರೆ. 40 ಮಂದಿ ಚಿಕಿತ್ಸೆ ಪಡೆಯುತ್ತಿದ್ದು 4 ಮಂದಿ ಮೃತಪಟ್ಟಿದ್ದಾರೆ.ಬೀದರ್‌:15 ಮಂದಿ ಸೋಂಕಿತರಿದ್ದು ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.ಚಿಕ್ಕಬಳ್ಳಾಪುರ:16 ಮಂದಿ ಸೋಂಕಿತರಿದ್ದು 8 ಮಂದಿ ಬಿಡುಗಡೆಯಾಗಿದ್ದಾರೆ 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದು ಇಬ್ಬರು ಮೃತಪಟ್ಟಿದ್ದಾರೆ.ಚಿತ್ರದುರ್ಗ:ಒಬ್ಬರು ಸೋಂಕಿತರಿದ್ದು, ಅವರು ಬಿಡುಗಡೆಯಾಗಿದ್ದಾರೆ.ದಕ್ಷಿಣ ಕನ್ನಡ:14 ಮಂದಿ ಸೋಂಕಿತರ ಪೈಕಿ 11 ಮಂದಿ ಬಿಡುಗಡೆಯಾಗಿದ್ದು, ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.ದಾವಣಗೆರೆ:ಇಬ್ಬರು ಸೋಂಕಿತರಿದ್ದರೂ ಇಬ್ಬರೂ ಬಿಡುಗಡೆಯಾಗಿದ್ದಾರೆ.ಧಾರವಾಡ:ಏಳು ಮಂದಿಯ ಪೈಕಿ ಒಬ್ಬರು ಬಿಡುಗಡೆಯಾಗಿದ್ದು 6 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗದಗ:ನಾಲ್ವರು ಸೋಂಕಿತರ ಪೈಕಿ ಮೂವರು ಚಿಕಿತ್ಸೆ ಪಡೆಯುತ್ತಿದ್ದರು ಒಬ್ಬರು ಮೃತಪಟ್ಟಿದ್ದಾರೆ.ಕಲಬುರಗಿ:27 ಮಂದಿಯ ಪೈಕಿ ಮೂವರು ಬಿಡುಗಡೆಯಾಗಿದ್ದು 21 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ಮೃತಪಟ್ಟಿದ್ದಾರೆ.ಕೊಡಗು:ಒಂದು ಪ್ರಕರಣ ಪತ್ತೆಯಾಗಿದ್ದು, ಅವರು ಬಿಡುಗಡೆ ಹೊಂದಿದ್ದಾರೆ.ಮಂಡ್ಯ:12 ಮಂದಿ ಸೋಂಕಿತರಿದ್ದು ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೈಸೂರು:84 ಮಂದಿ ಸೋಂಕಿತರು ಪತ್ತೆಯಾಗಿದ್ದು 24 ಮಂದಿ ಬಿಡುಗಡೆ ಹೊಂದಿದ್ದಾರೆ. 60 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತುಮಕೂರು:ಇಬ್ಬರು ಸೋಂಕಿತರು ಪತ್ತೆಯಾಗಿದ್ದು ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.ಉಡುಪಿ:ಮೂವರು ಸೋಂಕಿತರಿದ್ದು, ಮೂವರೂ ಬಿಡುಗಡೆಯಾಗಿದ್ದಾರೆ.ಉತ್ತರ ಕನ್ನಡ:11 ಸೋಂಕು ಪ್ರಕರಣಗಳ ಪೈಕಿ 9 ಮಂದಿ ಬಿಡುಗಡೆಯಾಗಿದ್ದು ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.ವಿಜಯಪುರ:32 ಮಂದಿ ಸೊಂಕಿತರಿದ್ದು 30 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇಬ್ಬರು ಮೃತಪಟ್ಟಿದ್ದಾರೆ.ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 × two =
Remember me
