ಬೆಂಗಳೂರು:ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 11 ಹೊಸ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 9 ಮಂದಿ 30 ವರ್ಷ ಒಳಗಿನವೇ ಆಗಿದ್ದಾರೆ. ಈ ಮೂಲಕ, ಕೆಲ ದಿನಗಳಿಂದ ಕರ್ನಾಟಕದಲ್ಲಿ ಪತ್ತೆಯಾಗುತ್ತಿರುವ ಹೊಸ ಸೋಂಕಿತರ ಪೈಕಿ ಮಕ್ಕಳು ಮತ್ತು ಯುವಕರೇ ಹೆಚ್ಚುತ್ತಿರುವುದು ಆತಂಕ ಸೃಷ್ಟಿಸಿದೆ.ಮುಂಬೈನಿಂದ ಮಂಡ್ಯಕ್ಕೆ ಬಂದಿದ್ದ ಮೂವರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇವರಲ್ಲಿ 25 ಮತ್ತು 27 ವರ್ಷದ ಯುವಕರು ಹಾಗೂ 24 ವರ್ಷದ ಯುವತಿ ಸೇರಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯ 12, 13 ವರ್ಷದ ಮಕ್ಕಳು ಮತ್ತು 19 ಹಾಗೂ 32 ವರ್ಷದ ಯುವಕರಲ್ಲಿ ಸೋಂಕು ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಬಾಗದ 30 ವರ್ಷದ ಮಹಿಳೆ, 50 ಮತ್ತು 55 ವರ್ಷದ ಪುರುಷರು ಸೋಂಕಿಗೆ ಒಳಗಾಗಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಇಲ್ಲಿಯವರೆಗೆ ಕರೊನಾ ಸೋಂಕಿತರ ಸಂಖ್ಯೆ 576ಕ್ಕೆ ಏರಿದೆ. 22 ಮಂದಿ ಮೃತಪಟ್ಟಿದ್ದು, 235 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ.ನಿಜಾಮುದ್ದೀನ್‌ ಮರ್ಕಜ್‌ ಮಸೀದಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬರೂ ಉಚಿತ ಆರೋಗ್ಯ ಸಹಾಯವಾಣಿ 080-29711171 ಸಂಪರ್ಕಿಸುವಂತೆ ಸರ್ಕಾರ ಸೂಚಿಸಿದೆ.ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 4 =
Remember me
