ನವದೆಹಲಿ:ಕರ್ನಾಟಕದ ಮಾಜಿ ರಾಜ್ಯಪಾಲ, ಕಾಂಗ್ರೆಸ್​ ಧುರೀಣ ಹಂಸರಾಜ್ ಭಾರದ್ವಾಜ್ ವಿಧಿ ವಶರಾಗಿದ್ದಾರೆ. ಕೇಂದ್ರ ಕಾನೂನು ಸಚಿವರಾಗಿದ್ದ ಅವರು ಹಲವು ದಿನಗಳಿಂದ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
2009ರಿಂದ 2014ರ ವರೆಗೆ ಕರ್ನಾಟಕದ ರಾಜ್ಯಾಪಾಲರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯದಲ್ಲಿ 4 ಮುಖ್ಯಮಂತ್ರಿಗಳಿಗೆ ಪ್ರಮಾಣವಚನ ಬೋಧಿಸಿದ್ದರು. ಅಲ್ಲದೆ ಹೆಚ್ಚುವರಿಯಾಗಿ 2012ರಿಂದ 2013 ಮಾರ್ಚ್​ವರಗೆ ಕೇರಳದ ರಾಜ್ಯಪಾಲರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಬಹುದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ದೆಹಲಿಯ ನಿಗಮ್ ಬೋದ್ ಘಾಟ್​ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಭಾರದ್ವಾಜ್ ಅವರ ಕುಟುಂಬ ವರ್ಗ ತಿಳಿಸಿದೆ.
ಭಾರದ್ವಾಜ್ ಗಾಂಧಿ ಕುಟುಂಬಕ್ಕೆ ನಿಷ್ಠಾವಂತರಾಗಿದ್ದರು. 1982ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ತೆಲಂಗಾಣ ಮರ್ಯಾದೆ ಹತ್ಯೆಯ ಪ್ರಮುಖ ಆರೋಪಿ, ಅಮೃತಾ ರಾವ್​ ತಂದೆ ಮಾರುತಿ ರಾವ್​ ಶವವಾಗಿ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 8 =
Remember me
