ಬೆಂಗಳೂರು/ನವದೆಹಲಿ: ಕರ್ನಾಟಕದಲ್ಲಿ ಮತ್ತೆರಡು ಹೊಸ ಕರೊನಾ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿನ ಕರೊನಾ ವೈರಸ್ Covid19 ಸೋಂಕು ಪೀಡಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇದೇ ವೇಳೆ, ಜಾಗತಿಕ ಮಟ್ಟದಲ್ಲಿ ಕರೊನಾ ಪೀಡಿತರ ಸಂಖ್ಯೆ 7,000ದ ಗಡಿದಾಟಿದೆ.ಕರ್ನಾಟಕದಲ್ಲಿ 60 ವರ್ಷದ ವ್ಯಕ್ತಿಯೊಬ್ಬರಿಗೆ ಮತ್ತು ಬ್ರಿಟನ್​ನಿಂದ ಹಿಂದಿರುಗಿದ 20 ವರ್ಷದ ಯುವತಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಮವಾರ ಸಂಜೆ ಎರಡು ಹೊಸ ಪ್ರಕರಣಗಳು ದೃಢಪಟ್ಟಿರುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿತ್ತು. ಹೀಗಾಗಿ ಸೋಂಕು ಪೀಡಿತರ ಸಂಖ್ಯೆ 6 ಇದ್ದದ್ದು ಎಂಟಕ್ಕೆ ಏರಿಕೆಯಾಗಿತ್ತು. ಮಂಗಳವಾರ ಬೆಳಗ್ಗೆ ಮತ್ತೆ ಎರಡು ಹೊಸ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕುಪೀಡಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಈ ಪೈಕಿ 60 ವರ್ಷದ ವ್ಯಕ್ತಿ ಕಲಬುರಗಿಯ ಮೃತ ಸೋಂಕುಪೀಡಿತ ವ್ಯಕ್ತಿ ಜತೆಗೆ ಸಂಪರ್ಕ ಹೊಂದಿದವರಾಗಿದ್ದರು. 20 ವರ್ಷದ ಯುವತಿ ಬ್ರಿಟನ್​ಗೆ ತೆರಳಿ ಬಂದ ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ. ಇಬ್ಬರನ್ನೂ ಐಸೋಲೇಷನ್ ವಾರ್ಡ್​ನಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚಿನ ಮಾಹಿತಿ ಪ್ರಕಾರ, ಜಾಗತಿಕ ಮಟ್ಟದಲ್ಲಿ 7,071 ಜನ ಕರೊನಾ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಾರೆ. 1,79,814 ಜನರಿಗೆ ಸೋಂಕು ತಗುಲಿದೆ. (ಏಜೆನ್ಸೀಸ್)
Karnataka: A 20 year-old woman with travel history to the UK and a 60 year-old person, a contact of the deceased Kalaburagi COVID-19 patient, have tested positive. Both are admitted in designated isolation hospital#Coronavirushttps://t.co/F09FUz00at
— ANI (@ANI)March 17, 2020

ಮೃತ ವೃದ್ಧನ ಟ್ರಾವೆಲ್ ಹಿಸ್ಟರಿ ಬಹಿರಂಗ

ಸರ್ಕಾರಿ ಕಚೇರಿಗಳಲ್ಲಿ ಸೋಂಕಿನ ಸಂಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
