ನವದೆಹಲಿ:ರಾಷ್ಟ್ರೀಯ ಆಹಾರ ಭದ್ರತಾ ಸೂಚ್ಯಂಕವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಗುರುವಾರ ಬಿಡುಗಡೆ ಮಾಡಿದ್ದಾರೆ. ದೇಶದಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದು, ಟಾಪ್ 10 ರಾಜ್ಯಗಳಲ್ಲಿ ಕರ್ನಾಟಕ ಸ್ಥಾನ ಪಡೆದುಕೊಂಡಿದೆ.
ದೊಡ್ಡ ರಾಜ್ಯಗಳು, ಸಣ್ಣ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಎಂಬ ಮೂರು ವಿಭಾಗದಲ್ಲಿ ಸೂಚ್ಯಂಕ ಸಿದ್ಧಪಡಿಸಲಾಗಿದೆ. ದೊಡ್ಡ ರಾಜ್ಯಗಳ ಪೈಕಿ 72 ಅಂಕ ಪಡೆಯುವ ಮೂಲಕ ಗುಜರಾತ್ ಮೊದಲ ಸ್ಥಾನದಲ್ಲಿದೆ. ಕೇರಳ ಎರಡು ಹಾಗೂ ತಮಿಳುನಾಡು ಮೂರನೇ ಸ್ಥಾನ ಪಡೆದಿವೆ. ಕರ್ನಾಟಕ 9ನೇ ಸ್ಥಾನದಲ್ಲಿದೆ. 20 ದೊಡ್ಡ ರಾಜ್ಯಗಳ ಪೈಕಿ ಬಿಹಾರ ಕೊನೆಯ ಸ್ಥಾನದಲ್ಲಿದೆ. ಆಹಾರದಲ್ಲಿನ ಶುದ್ಧತೆ, ಸರಬರಾಜು ಸರಪಣಿ, ಜನರಿಗೆ ಆಹಾರದ ಲಭ್ಯತೆ ಇನ್ನಿತರ ಅಂಶಗಳನ್ನು ಅಧ್ಯಯನ ನಡೆಸಿ ಈ ಪಟ್ಟಿ ಸಿದ್ಧಪಡಿಸಲಾಗುತ್ತದೆ. ವಿಶ್ವದಲ್ಲಿ ಶೇ. 10 ಜನರು ಕಳಪೆ ಆಹಾರ ಸೇವಿಸಿ ಅಸ್ವಸ್ಥರಾಗುತ್ತಾರೆ ಎಂದು ವಿಶ್ವಸಂಸ್ಥೆ ವರದಿ ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 11 =
Remember me
