ನವದೆಹಲಿ:ಕೊವಿಡ್-19 ಎದುರಿಸಲು ಅರಬ್ ಸಂಯುಕ್ತ ಸಂಸ್ಥಾನದ (ಯುಎಇ) ಆರೋಗ್ಯ ವೃತ್ತಿನಿರತರಿಗೆ ನೆರವಾಗುವ ಉದ್ದೇಶದಿಂದ ಭಾರತದ 88 ದಾದಿಯರ ಪ್ರಥಮ ತಂಡ ಶನಿವಾರ ದುಬೈ ತಲುಪಿದೆ. ಈ ದಾದಿಯರು ತುರ್ತು ನಿಗಾ ಘಟಕಗಳಲ್ಲಿ (ಐಸಿಯು) ಕಾರ್ಯ ನಿರ್ವಹಿಸುವ ತಜ್ಞತೆ ಹೊಂದಿದ್ದಾರೆ.
ಕೊಲ್ಲಿ ರಾಷ್ಟ್ರವಾದ ಯುಎಇಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 17,417 ದಾಟಿದೆ. ಶನಿವಾರ 624 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ದೇಶದ ಆರೋಗ್ಯ ಸಚಿವಾಲಯ ತಿಳಿಸಿದೆ. ಒಟ್ಟು 185 ಜನರು ಮೃತಪಟ್ಟಿದ್ದಾರೆ.
ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರದ ಈ ದಾದಿಯರನ್ನು ಮೊದಲು 14 ದಿನಗಳ ಕ್ವಾರಂಟೈನ್​ನಲ್ಲಿ ಇಡಲಾಗುತ್ತದೆ. ನಂತರ ಅವರನ್ನು ವಿವಿಧ ಆಸ್ಪತ್ರೆಗಳಲ್ಲಿ ಕೆಲಸದ ಮೇಲೆ ನಿಯೋಜಿಸಲಾಗುತ್ತದೆ. ದಾದಿಯರ ನಿಯೋಜನೆ ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಬಲಪಡಿಸಲಿದೆ ಎಂದು ಯುಎಇಯ ಭಾರತ ರಾಯಭಾರಿ ಪವನ್ ಕಪೂರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − three =
Remember me
