ನವದೆಹಲಿ:ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಉದ್ಭವಿಸಿರುವ ಸಂಘರ್ಷ ಮುಂದುವರಿದಿದ್ದು, ಕರ್ನಾಟಕಕ್ಕೆ ಇನ್ನೊಮ್ಮೆ ಹಿನ್ನಡೆ ಆದಂತಾಗಿದೆ. ಅರ್ಥಾತ್, ತಮಿಳುನಾಡಿಗೆ ಇನ್ನೂ ನೀರು ಹರಿಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ.
ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್​ಸಿ) 89ನೇ ಸಭೆಯಲ್ಲಿ ಇಂಥದ್ದೊಂದು ಆದೇಶ ಹೊರಬಿದ್ದಿದೆ. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳ ಅಹವಾಲನ್ನು ಆಲಿಸಿದ ಬಳಿಕ ಸಮಿತಿ ಈ ಆದೇಶವನ್ನು ನೀಡಿದೆ.
ಇದನ್ನೂ ಓದಿ:ಈ ದೇವಸ್ಥಾನದಲ್ಲಿ ಮಹಿಳೆಯರಿಗಷ್ಟೇ ಗರ್ಭಗುಡಿಗೆ ಪ್ರವೇಶ, ಪೂಜಿಸಲು ಅವಕಾಶ: ಮುಟ್ಟಾಗಿದ್ದರೂ ಇಲ್ಲಿ ಮೈಲಿಗೆಯಲ್ಲ!
ಸಿಡಬ್ಲ್ಯುಆರ್​ಸಿ ಹೊಸ ಆದೇಶದ ಪ್ರಕಾರ ಕರ್ನಾಟಕ ನ. 1ರಿಂದ 15ರ ವರೆಗೆ ಪ್ರತಿನಿತ್ಯ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಹರಿಸಬೇಕಾಗಿದೆ. ಬಿಳಿಗುಂಡ್ಲು ಮೂಲಕ ಈ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಲಾಗಿದೆ.
ಜಲಾಶಯಗಳಿಗೆ ನೀರಿನ ಹರಿವು ಬಹುತೇಕ ಇಲ್ಲವಾಗಿರುವುದರಿಂದ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ ಎಂಬುದಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಗಮನಕ್ಕೆ ತರುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಗೆ ಕರ್ನಾಟಕ ಮನವಿ ಮಾಡಿಕೊಂಡಿದ್ದರೂ ಈ ಆದೇಶ ಹೊರಬಿದ್ದಿದೆ ಎನ್ನಲಾಗಿದೆ.
The Cauvery Water Regulation Committee (CWRC) recommends Karnataka to release 2600 cusecs of water per day to Tamil Nadu at Biligundlu from 1st November to 15th Novemberpic.twitter.com/DsSR9zW3lM
— ANI (@ANI)October 30, 2023

ಸಾಫ್ಟ್​ವೇರ್​ ಉದ್ಯೋಗ: ಫ್ರೆಷರ್ಸ್​ಗೆ ಭಾರತದಲ್ಲೇ ಕಡಿಮೆ ಸಂಬಳ, ಜಾಸ್ತಿ ಕೆಲಸ!

ಫ್ರೆಷರ್ಸ್​ಗೆ ಹೋಲಿಸಿದ್ರೆ ಇನ್​ಫೊಸಿಸ್ ಸಿಇಒ ಸಂಬಳ 2,200 ಪಟ್ಟು ಹೆಚ್ಚು!; ಅವರು ಎಷ್ಟು ಗಂಟೆ ಕೆಲಸ ಮಾಡ್ತಾರೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − five =
Remember me
