ದಾವಣಗೆರೆ:ಬಾಲಿವುಡ್​ ನಿರ್ಮಾಪಕ ಬೋನಿ ಕಪೂರ್​ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಬರೋಬ್ಬರಿ 39 ಲಕ್ಷ ರೂ. ಮೌಲ್ಯದ 66 ಕೆಜಿ ತೂಕದ ಬೆಳ್ಳಿಯ ವಸ್ತುಗಳನ್ನು ಭಾರತೀಯ ಚುನಾವಣಾ ಆಯೋಗ ವಶಕ್ಕೆ ಪಡೆದುಕೊಂಡಿದೆ.
ಸೂಕ್ತ ದಾಖಲೆಗಳಿಲ್ಲಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ಹೊರ ವಲಯದ ಹೆಬ್ಬಾಳು ಟೋಲ್​ ಬಳಿ ಇರುವ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ವೇಳೆ ಬೆಳ್ಳಿಯ ವಸ್ತುಗಳನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದೆ. ಚೆನ್ನೈನಿಂದ ಮುಂಬೈಗೆ ಬಿಎಂಡಬ್ಲ್ಯು ಕಾರಿನಲ್ಲಿ ಐದು ಬಾಕ್ಸ್‌ಗಳಲ್ಲಿ ಸೂಕ್ತ ದಾಖಲೆಗಳಿಲ್ಲದೆ ಬೆಳ್ಳಿಯ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಪತ್ನಿ, ಪುತ್ರನ ಜತೆ ವಿನೋದ್​ ರಾಜ್​!? ಚಂದನವನದಲ್ಲಿ ಸಂಚಲನ ಮೂಡಿಸಿದೆ ಈ ನಿರ್ದೇಶಕನ ಮಾತು

ದಾವಣಗೆರೆಯಲ್ಲಿ ಪ್ರಕರಣ ದಾಖಲುಬೆಳ್ಳಿಯ ಬಟ್ಟಲುಗಳು, ಚಮಚಗಳು, ನೀರಿನ ಜಗ್​ ಹಾಗೂ ತಟ್ಟೆಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನ ಚಾಲಕ ಸುಲ್ತಾನ್​ ಖಾನ್ ಸೇರಿದಂತೆ ಅವರ​ ಜತೆಯಲ್ಲಿದ್ದ ಹರಿಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿ ವಿಚಾರಣೆಬೋನಿ ಕಪೂರ್​ ಒಡೆತನದ ಬೇವ್ಯೂವ್​ ಪ್ರಾಜೆಕ್ಟ್ಸ್​ ಪ್ರೈವೆಟ್​ ಲಿಮಿಟೆಡ್​ (Bayview Projects Pvt Ltd) ಹೆಸರಿನಲ್ಲಿ ನೋಂದಾಯಿಸಲ್ಪಟ್ಟಿರುವುದು ಕಂಡುಬಂದಿದೆ. ಬೆಳ್ಳಿಯ ವಸ್ತುಗಳು ಬಾಲಿವುಡ್ ನಿರ್ಮಾಪಕ ಬೋನಿ ಕಪೂರ್ ಅವರ ಕುಟುಂಬಕ್ಕೆ ಸೇರಿದವು ಎಂದು ತನಿಖೆ ವೇಳೆ ಹರಿ ಸಿಂಗ್ ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ:2 ಸಂಚು ವಿಫಲ, ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು 3ನೇ ಸಂಚು ನಡೆದಿದೆ: ಎಚ್​ಡಿಕೆ ಆಕ್ರೋಶ

ಮುಂದುವರಿದ ತನಿಖೆಸೂಕ್ತ ದಾಖಲೆಗಳನ್ನು ನೀಡದ ಕಾರಣ ಬೆಳ್ಳಿ ವಸ್ತುಗಳನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಳ್ಳಿಯ ವಸ್ತುಗಳು ನಿರ್ಮಾಪಕ ಬೋನಿ ಕಪೂರ್ ಅವರ ಕುಟುಂಬಕ್ಕೆ ಸೇರಿದ್ದಾ? ಎಂಬುದನ್ನು ಖಚಿತ ಪಡಿಸಿಕೊಳ್ಳಲು ತನಿಖೆ ನಡೆಸುತ್ತಿದ್ದಾರೆ.(ಏಜೆನ್ಸೀಸ್​)
ಅಮುಲ್​ ಅಂದ್ರೆ ಬಿಜೆಪಿ, ನಂದಿನಿ ಅಂದ್ರೆ ಕಾಂಗ್ರೆಸ್ಸಾ? ಸಚಿವ ಸುಧಾಕರ್ ತಿರುಗೇಟು

ಸುದೀಪ್​ ಹೇಳಿಕೆಯಿಂದ ಆಘಾತ ಹಾಗೂ ನೋವಾಗಿದೆ: ನಟ ಪ್ರಕಾಶ್​ ರಾಜ್​

ದಾವಣಗೆರೆಯಲ್ಲಿ ಬೆಳ್ಳಂಬೆಳಗ್ಗೆ ಅಮ್ಮ-ಮಗಳ ಮೇಲೆ ಆನೆ ದಾಳಿ: ಪುತ್ರಿ ಸಾವು, ತಾಯಿಯ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
