ಬೆಂಗಳೂರು:ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂ. ಹಗರಣಕ್ಕೆ ಸಂಬಂಧಿಸಿ ನಿಗಮದ ಅಧಿಕಾರಿ ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡಿದ್ದುದು ತಿಳಿದ ಸಂಗತಿಯೇ. ಈ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದ್ದು, ಅಧಿಕಾರಿಗಳು ಚಾರ್ಜ್‌ ಶೀಟ್ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಟ್ರಾಯ್ ಎಚ್ಚರಿಕೆ.. ವೈಯಕ್ತಿಕ ಮಾಹಿತಿ ಕೇಳುವ ಮೋಸದ ಕರೆಗಳಿಗೆ ಮರುಳಾಗಬೇಡಿ!
ಚಾರ್ಜ್‌ ಶೀಟ್‌ನಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್ ಹೆಸರನ್ನು ಉಲ್ಲೇಖಿಸದೆ, ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ರನ್ನು ಆರೋಪಿಗಳನ್ನಾಗಿ ಮಾಡಿ ಚಾರ್ಜ್‌ ಶೀಟ್ ಸಲ್ಲಿಸಲಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಮೇ 26ರಂದು ಶಿವಮೊಗ್ಗದ ವಿನೋಬನಗರ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಬಳಿಕ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದರು.
ಈ ಘಟನೆ ಸಂಬಂಧ ಶಿವಮೊಗ್ಗದ ವಿನೋಭಾನಗರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಚಂದ್ರಶೇಖರ್ ಪತ್ನಿ ನೀಡಿದ್ದ ದೂರು ಆಧರಿಸಿ ಸಿಐಡಿ ತನಿಖೆ ಕೈಗೆತ್ತಿಕೊಂಡಿತ್ತು. ಡೆತ್‌ ನೋಟ್ ಆಧರಿಸಿ ತನಿಖೆ ಮಾಡಿರುವ ಸಿಐಡಿ ಅಧಿಕಾರಿಗಳನ್ನು ಆರೋಪಿಗಳಾಗಿ ಮಾಡಿ ಚಾರ್ಜ್‌ಶೀಟ್ ಸಲ್ಲಿಸಿದೆ.
ತಿಂಗಳಿಗೆ 6 ಲಕ್ಷ ಜೀವನಾಂಶ ಕೊಡಿ.. ಮಾಜಿ ಪತಿ ವಿರುದ್ಧ ಮೊಕದ್ದಮೆ ಹೂಡಿದ ಮಹಿಳೆಗೆ ಹೈಕೋರ್ಟ್​ ಶಾಕ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − eleven =
Remember me
