ಬೆಂಗಳೂರು:ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಂಭವವಿದ್ದು, ಮೊದಲ ದಿನ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್‌ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.
ನಿನ್ನೆಯೂ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದ್ದು, ಬೆಂಗಳೂರಿನಲ್ಲಿ 2 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಮಿಳುನಾಡಿನಲ್ಲಿ ಮಳೆ ನಿಲ್ಲುತ್ತಿಲ್ಲ
ತಮಿಳುನಾಡಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಅಂತ್ಯ ಕಾಣುವ ಲಕ್ಷಣಗಳೇ ಕಾಣುತ್ತಿಲ್ಲ. ಇಂದು ಕೂಡ ಭಾರೀ ಮಳೆಯಿಂದಾಗಿ ಕುನ್ನೂರು ಮತ್ತು ಕೋಟಗಿರಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
’48 ಗಂಟೆ ಸಮಯವಷ್ಟೇ ಬಾಕಿ…’; ಮುಂಬೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
