ನವದೆಹಲಿ: 74ನೇ ಗಣರಾಜ್ಯೋತ್ಸವದಲ್ಲಿ ಕರ್ನಾಟಕ ರಾಜ್ಯದ “ನಾರಿ ಶಕ್ತಿ” ಥೀಮ್​ನ ಸ್ತಬ್ಧಚಿತ್ರ ಪ್ರದರ್ಶನವಾಗಿದೆ. ಈ ಮೂಲಕ ಕಳೆದ 14 ವರ್ಷಗಳಿಂದ ನಿರಂತರವಾಗಿ ಪಥಸಂಚಲನದಲ್ಲಿ ಪಾಲ್ಗೊಂಡ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ಈ ಬಾರಿಯ ರಾಜ್ಯ ಸ್ತಬ್ಧ ಚಿತ್ರದ ಮಹಿಳೆಯರ ಸಾಧನೆಯನ್ನು ದೇಶದ ಮುಂದಿಡುವ ಪ್ರಯತ್ನ ಮಾಡಿದೆ. ಸ್ತಬ್ಧಚಿತ್ರದಲ್ಲಿ ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಹಾಲಕ್ಕಿ ಅವರ ಸಾಧನೆಗಳನ್ನು ಪ್ರದರ್ಶಿಸಲಾಗಿದೆ.
#RepublicDay| Karnataka's tableau symbolically unveils exceptional achievements of state's 3 women achievers.Sulagitti Narasamma – a midwife, Tulsi Gowda Halakki – known as 'Vruksha Maate' & Saalumarada Thimmakka are noted names due to their selfless contribution to society.pic.twitter.com/AYHBdwj48k— ANI (@ANI)January 26, 2023
#RepublicDay| Karnataka's tableau symbolically unveils exceptional achievements of state's 3 women achievers.Sulagitti Narasamma – a midwife, Tulsi Gowda Halakki – known as 'Vruksha Maate' & Saalumarada Thimmakka are noted names due to their selfless contribution to society.pic.twitter.com/AYHBdwj48k
ಗಿಡಿ, ಮರ, ಬೆಟ್ಟ-ಗುಡ್ಡಗಳಿಂದ ಸ್ತಬ್ಧ ಚಿತ್ರವನ್ನು ಅಲಂಕಾರಗೊಳಿಸುವ ಮೂಲಕ ರಾಜ್ಯದ ಸಸ್ಯ ಸಂಪತ್ತನ್ನು ತಿಳಿಸುವ ಪ್ರಯತ್ನ ಮಾಡಲಾಗಿದೆ. ನಾರಿ ಶಕ್ತಿಯನ್ನು ಪ್ರತಿಬಿಂಬಿಸುತ್ತಿರುವುದರಿಂದ ಚನ್ನಪಟ್ಟಣದ ಗೊಂಬೆ ಮಾದರಿಯ ತೊಟ್ಟಿಲು ಚಿತ್ರ ಮತ್ತು ನರಸಮ್ಮನವರು ಮಗುವನ್ನು ಎತ್ತಿಕೊಂಡಿರುವಂತೆ ಚಿತ್ರ ಪ್ರದರ್ಶನಗೊಂಡಿದೆ.
ಈ ಬಗ್ಗೆ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕದ ಮಹಿಳಾ ಸಾಧಕರ ಪ್ರತೀಕವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಹಾಗೂ ಸಾಲು ಮರದ ತಿಮ್ಮಕ್ಕ ಅವರನ್ನೊಳಗೊಂಡ “ನಾರಿ ಶಕ್ತಿ” ಸ್ತಬ್ಧ ಚಿತ್ರ ನವ ದೆಹಲಿಯ ಕರ್ತವ್ಯ ಪಥದಲ್ಲಿ ವಿಜೃಂಭಿಸಿದೆ ಎಂದು ಬರೆದುಕೊಂಡಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nine + 17 =
Remember me
