ನವದೆಹಲಿ:ಜನವರಿ 26ರಂದು ದೆಹಲಿಯ ರಾಜ್​ಪಥ್​ನ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಭಾಗವಹಿಸಿದ್ದ ಕರ್ನಾಟಕದ “ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು” ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ಎರಡನೇ ಸ್ಥಾನದ ಗೌರವ ಸಿಕ್ಕಿದೆ. ಕರಕುಶಲ ಕಲೆಗಳ ಸಮಗ್ರ ಸ್ತಬ್ಧಚಿತ್ರವನ್ನು ರಾಜ್ಯ ವಾರ್ತಾ ಇಲಾಖೆ ಉಸ್ತುವಾರಿಯಲ್ಲಿ ಸಿದ್ಧಪಡಿಸಲಾಗಿತ್ತು.
ಉತ್ತರ ಪ್ರದೇಶದ ಕಾಶಿ ಕಾರಿಡಾರ್ ಕುರಿತ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ ಸಿಕ್ಕಿದ್ದರೆ, ಮೇಘಾಲಯ ರಾಜ್ಯಕ್ಕೆ 50ರ ಸುವರ್ಣ ಸಂಭ್ರಮ ಮತ್ತು ಮಹಿಳೆಯರ ಸಹಕಾರ ಸಂಘಗಳ ಅಭಿವೃದ್ಧಿ ಕುರಿತ ಸ್ತಬ್ದಚಿತ್ರ ಮೂರನೇ ಸ್ಥಾನಕ್ಕೆ ಪಾತ್ರವಾಗಿದೆ. ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ ಪ್ರಶಸ್ತಿ ಘೋಷಿಸಿದೆ.
ಪರೇಡ್ ಬಳಿಕ ರಾಜಪಥದಲ್ಲಿ ನೃತ್ಯದ ಮೂಲಕ ಗಮನಸೆಳೆದ ‘ವಂದೇ ಭಾರತಮ್’ ನೃತ್ಯ ತಂಡವು ವಿಶೇಷ‌ ಬಹುಮಾನ ಪಡೆದಿದೆ. ಹುಬ್ಬಳ್ಳಿಯ ಮಯೂರ ಭರತ ನೃತ್ಯ ಅಕಾಡೆಮಿಯ ನೃತ್ಯಪಟುಗಳು ಈ ತಂಡದಲ್ಲಿದ್ದರು. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ವಿಭಾಗದಲ್ಲಿ ಶಿಕ್ಷಣ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯದ ಸ್ತಬ್ಧಚಿತ್ರಕ್ಕೆ ವಿಶೇಷ ಬಹುಮಾನದ ಮನ್ನಣೆ ಸಿಕ್ಕಿದೆ.ರಾಜಪಥದಲ್ಲಿ ಪಥಸಂಚಲನ ಮಾಡಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಹಾಗೂ ನೌಕಾದಳದ ಸಿಬ್ಬಂದಿಗೆ ವಿಶೇಷ‌ ಬಹುಮಾನ ಘೋಷಿಸಲಾಗಿವೆ. ಕೇಂದ್ರ ಲೋಕೋಪಯೋಗಿ ಇಲಾಖೆಯ ಸುಭಾಷ್-125 ಸ್ತಬ್ಧಚಿತ್ರಕ್ಕೂ ವಿಶೇಷ ಬಹುಮಾನ ನೀಡಲು ತೀರ್ಮಾನಿಸಲಾಗಿದೆ.
ಕರ್ನಾಟಕದ ಸ್ತಬ್ದಚಿತ್ರ ನಿರ್ಮಾಣ ಕಾರ್ಯದಲ್ಲಿ ಹೆಸರಾಂತ ಕಲಾ ನಿರ್ದೇಶಕ ಶಶಿಧರ್ ಅಡಪ ನೇತೃತ್ವದ ಪ್ರತಿರೂಪಿ ಸಂಸ್ಥೆಯ ಒಂದು ನೂರಕ್ಕೂ ಹೆಚ್ಚು ಕಲಾವಿದರು, ಸುಪ್ರಸಿದ್ಧ ಸಂಗೀತ ನಿರ್ದೇಶಕ ಪ್ರವೀಣ್ ದಯಾನಂದ ರಾವ್ ಮತ್ತು ತಂಡ ಹಾಗೂ ಜಾನಪದ ತಜ್ಞ ಡಾ.ರಾಧಾಕೃಷ್ಣ ಉರಾಳ ನೇತೃತ್ವದ ಕಲಾ ಕದಂಬ ಕಲಾ ಕೇಂದ್ರದ ತಂಡವೂ ಶ್ರಮಿಸಿದೆ.
ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ಜಾತ್ರೆಗೆ ಸಾರ್ವಜನಿಕರಿಗಿಲ್ಲ ಪ್ರವೇಶ: ರಥೋತ್ಸವಕ್ಕೆ ಕರೊನಾ ಕರಿಛಾಯೆ

ಮದ್ಯದ ಜತೆ ವಿಷ ಬೆರೆಸಿಕೊಂಡು ಆತ್ಮಹತ್ಯೆ: ಪತ್ನಿಯ ಮನೆಯಲ್ಲೇ ವಾಸವಿದ್ದ ಪತಿ, ಕೌಟುಂಬಿಕ ಕಲಹದಿಂದ ನೊಂದು ಸಾವಿಗೆ ಶರಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − nine =
Remember me
