ಜೈಪುರ:ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್ ಗೊಗಮೆಡಿ ಅವರನ್ನು ಹಾಡಹಗಲೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ. ಶ್ಯಾಮನಗರದಲ್ಲಿ ಇರುವ ಅವರ ನಿವಾಸದಲ್ಲಿ ಘಟನೆ ನಡೆದಿದ್ದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹತ್ಯೆಯ ವಿಡಿಯೋ ವೈರಲ್​ ಆಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕುರಿತು ಹಲವು ಪ್ರಶ್ನೆಗಳು ಎದ್ದಿವೆ. ಗುಂಡಿನ ದಾಳಿಯಲ್ಲಿ ಅವರ ಇಬ್ಬರು ಅಂಗರಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಇಬ್ಬರು ದುಷ್ಕರ್ಮಿಗಳು ಸುಖದೇವ್​ ಅವರೊಂದಿಗೆ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಬಳಿಕ ಏಕಾಏಕಿ ತಮ್ಮ ಬಳಿ ಇದ್ದ ಬಂದೂಕಿನಿಂದ ಅವರ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಅವರ ರಕ್ಷಣೆಗೆ ಬಂದವರ ಮೇಲೂ ಗುಂಡು ಹಾರಿಸಿ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಪ್ರೇಯಸಿಯನ್ನು ಕೊಂದು ಸ್ಟೇಟಸ್​​ಗೆ ಫೋಟೋ ಹಾಕಿದ ಪಾಪಿ ಪ್ರಿಯಕರ
ಗಾಯಾಳುವನ್ನು ಕೂಡಲೇ ಹತ್ತಿರದಲ್ಲಿದ್ದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ತಿವ್ರ ರಕ್ತಸ್ತ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೆ ಸುಖದೇವ್​ ಸಿಂಗ್​ ಗೊಗಮೆಡಿ ಕೊನೆಯುಸಿರು ಎಳೆದಿದ್ದಾರೆ. ಸುಖದೇವ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಆತಂಕ ಮನೆ ಮಾಡಿದೆ. ಪೊಲೀಸರಲ್ಲದೆ, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸುಖದೇವ್ ಸಿಂಗ್ ಗೊಗಮೇಡಿ ಅವರು ರಾಷ್ಟ್ರೀಯ ಕರ್ಣಿ ಸೇನೆಯೊಂದಿಗೆ ಬಹಳ ಹಿಂದಿನಿಂದಲೂ ಸಂಬಂಧ ಹೊಂದಿದ್ದಾರೆ. ನಂತರ ಇವರೇ ಈ ಸಂಘಟನೆಯಿಂದ ದೂರವಾಗಿ ಪ್ರತ್ಯೇಕ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯನ್ನು ಕಟ್ಟಿದ್ದಾರೆ. ಪದ್ಮಾವತ್ ಸಿನಿಮಾ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಇವರ ಹೆಸರು ಕೇಳಿ ಬರುತ್ತಿತ್ತು.
ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಗಜೇಂದ್ರ ಸಿಂಗ್​ ಶೇಖಾವತ್​, ಈ ಹಿಂದೆ ಸುಖದೇವ್​ ಅವರು ತಮಗೆ ಜೀವ ಬೆದರಿಕೆ ಇರುವ ಬಗ್ಗೆ ಹಲವು ಬಾರಿ ದೂರು ನೀಡಿದ್ದರು ಅವರಿಗೆ ಸೂಕ್ತ ಭದ್ರತೆಯನ್ನು ಒದಗಿಸುವಲ್ಲಿ ಹಿಂದಿನ ಸರ್ಕಾರ ವಿಫಲವಾಗಿತ್ತು. ರಾಜಸ್ಥಾನದಲ್ಲಿ ನಮ್ಮ ಸರ್ಕಾರ ರಚಿಸಿದ ನಂತರ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕ್ರಮ ಕೈಗೊಳ್ಳಲಾಗುವುದು. ಹತ್ಯೆಯ ಹಿಂದೆ ಯಾರೇ ಇದ್ದರೂ ಅವರನ್ನು ಸುಮ್ಮನೇ ಬಿಡುವ ಮಾತಿಲ್ಲ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್​ ಶೇಖಾವತ್​ ಹೇಳಿದ್ದಾರೆ.
#WATCH| On the murder of Sukhdev Singh Gogamedi, national president of Rashtriya Rajput Karni Sena, Union minister Gajendra Singh Shekhawat says, "He wasn't given adequate security even after he reported about threats to his life to the police. After forming govt in Rajasthan,…pic.twitter.com/H5lObw9yjr
बहुत ही दुखद खबर 😢💔 बुरी खबर…श्री राष्ट्रीय राजपूत करणी सेना के प्रदेश अध्यक्ष सुखदेव सिंह गोगामेड़ी ने अस्पताल में तोड़ा दम..हमेशा दूसरों की सहायता करने वाले इंसान की इस तरीके से हत्या कभी सोचा नहीं था! 😢@jaipur_policeजल्दी से जल्दी इनके गुनहगारों का एनकाउंटर करिए या…pic.twitter.com/MYz3e1cc8e
#WATCH| Rajasthan | Sukhdev Singh Gogamedi, national president of Rashtriya Rajput Karni Sena, shot dead by unidentified bike-borne criminals in Jaipur. He was declared dead by doctors at the hospital where he was rushed to. Details awaited.pic.twitter.com/wGPU53SG2h
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
