ನವದೆಹಲಿ: ಕಾಂಗ್ರೆಸ್​ ಹಿರಿಯ ಮುಖಂಡ ಪಿ.ಚಿದಂಬರಂ ಅವರ ಪುತ್ರ, ಸಂಸದ ಕಾರ್ತಿ ಚಿದಂಬರಂ ಅವರಲ್ಲಿ ಕರೊನಾ ಸೊಂಕು ದೃಢಪಟ್ಟಿದೆ.
ಈ ಬಗ್ಗೆ ಕಾರ್ತಿ ಅವರು ಟ್ವೀಟ್ ಮಾಡಿದ್ದಾರೆ. ನನ್ನಲ್ಲಿ ಕರೊನಾದ ಪ್ರಾಥಮಿಕ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದೆ. ವರದಿ ಪಾಸಿಟಿವ್​ ಬಂದಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಮುಸ್ಲಿಂ ಮಹಿಳೆ ತಲಾಖ್ ಎಂದ ತಕ್ಷಣ ಅದು ಕಾನೂನು ಸಮ್ಮತವಾಗುವುದಿಲ್ಲ: ಈ ಮಾತು ಈಗ್ಯಾಕೆ?
ಹಾಗೇ, ಇತ್ತೀಚೆಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಎಲ್ಲರೂ ಕೊವಿಡ್​ ತಪಾಸಣೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.ಕಾರ್ತಿ ಅವರು ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದಾರೆ. ನಿನ್ನೆ ತಮಿಳುನಾಡಿನ ರಾಜ್ಯಪಾಲ ಬನ್ವರಿಲಾಲ್​ ಪುರೋಹಿತ್​, ಗೃಹ ಸಚಿವ ಅಮಿತ್​ ಷಾ, ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್​ ಸಿಂಗ್​, ಮುಖ್ಯಮಂತ್ರಿ ಯಡಿಯೂರಪ್ಪನವರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗೆ ಒಬ್ಬೊಬ್ಬರೇ ರಾಜಕಾರಣಿಗಳಲ್ಲಿ ಕರೊನಾ ವೈರಸ್​ ಕಾಣಿಸಿಕೊಳ್ಳುತ್ತಿದೆ. (ಏಜೆನ್ಸೀಸ್​)
ಕೊವಿಡ್​-19 ಸೋಂಕಿಗೆ ಒಳಗಾದ ಅಮಿತ್​ ಷಾ ನಡೆ ಬಗ್ಗೆ ಅಚ್ಚರಿ, ಅನುಮಾನ ವ್ಯಕ್ತಪಡಿಸಿದ ಶಶಿ ತರೂರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + five =
Remember me
