ನವದೆಹಲಿ:ಲಾಕ್​​ಡೌನ್​​ನಿಂದಾಗಿ ಪಾಕಿಸ್ತಾನದಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರ ನಿವಾಸಿಗಳು ಜೂನ್ 25 ರಿಂದ ಪಂಜಾಬ್​​ನ ಅಟ್ಟಾರಿ- ವಾಘಾ ಗಡಿಯ ಮೂಲಕ ರಸ್ತೆ ಮಾರ್ಗವಾಗಿ ಹಿಂದಿರುಗಲಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.ಅವರ ವಾಪಸಾತಿಗೆ ಸೂಕ್ತ ವ್ಯವಸ್ಥೆ ಮಾಡುವಲ್ಲಿ ಅಮೃತಸರ ಸ್ಥಳೀಯ ಆಡಳಿತ ವಿಭಾಗಕ್ಕೆ ಸಹಾಯ ಮಾಡಲು ಅಟ್ಟಾರಿಗೆ ಜಮ್ಮು ಕಾಶ್ಮೀರ ಸರ್ಕಾರ ಹಿರಿಯ ಅಧಿಕಾರಿಗಳನ್ನು ಕಳುಹಿಸಲಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ವಲಸೆ ಕಾರ್ಮಿಕರ ಮುಖದಲ್ಲಿ ನಗು ಮೂಡಿಸಿದ ಕೇಂದ್ರ; ಮಹತ್ವದ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಬಾಂಗ್ಲಾದೇಶ ಮತ್ತು ಇತರ ದೇಶಗಳಲ್ಲಿ ಸಿಲುಕಿದ್ದ ಕಾಶ್ಮೀರಿಗಳ ವಾಪಸಾತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಮ್ಮು ಮತ್ತು ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿವಿಆರ್ ಸುಬ್ರಮಣಿಯಮ್ ವಿದೇಶಾಂಗ ಕಾರ್ಯದರ್ಶಿಗೆ ಪತ್ರ ಬರೆದ ನಂತರ ಹಲವರನ್ನು ಮನೆಗೆ ಕರೆದೊಯ್ಯಲಾಗಿದ್ದು, ಇನ್ನುಳಿದವರನ್ನು ಕರೆತರುವ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲದೆ, ವಿಶೇಷ ರೈಲುಗಳು ಮತ್ತು ಬಸ್​​ಗಳಲ್ಲಿ ಕಾಶ್ಮೀರಿಗಳು ಮರಳಲು ಅನುಕೂಲವಾಗುವಂತೆ ವಿವಿಧ ರಾಜ್ಯಗಳಿಗೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿತ್ತು.
https://www.vijayavani.net/covid-19-drug-patanjali-to-launch-ayurvedic-medicine-coronil-to-treat-coronavirus-infection-today
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
