ಜಮ್ಮು:ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಉಗ್ರಗಾಮಿಗಳು ನಡೆಸಿದ ಹೊಂಚು ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದರು. ಈ ಸಂಬಂಧ 24 ಜನರನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:IND vs ZIM T20: ಜಿಂಬಾಬ್ವೆ ವಿರುದ್ಧ 3ನೇ ಟಿ20 ಪಂದ್ಯದಲ್ಲೂ ಗೆದ್ದು ಬೀಗಿದ ಟೀಮ್ ಇಂಡಿಯಾ; ಸರಣಿಯಲ್ಲಿ 1-2 ಮುನ್ನಡೆ
ದಟ್ಟ ಅರಣ್ಯಗಳಲ್ಲಿ ಅವಿತಿದ್ದಾರೆಂದು ಭಯೋತ್ಪಾದಕರನ್ನು ಹತ್ತಿಕಲು ಸೇನೆ ಮತ್ತು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ. ಉಧಂಪುರ, ಸಾಂಬಾ, ರಜೌರಿ ಮತ್ತು ಪೂಂಚ್ ಜಿಲ್ಲೆಗಳ ದಟ್ಟ ಅರಣ್ಯಗಳಲ್ಲಿ ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಥುವಾದಲ್ಲಿ ಹೊಂಚು ದಾಳಿ ನಡೆದ ಮರುದಿನ ಮಂಗಳವಾರ ಸಂಜೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದ ದೋಡಾ ಜಿಲ್ಲೆಯ ಎತ್ತರದ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾಂಬಾದ ಲಾಲಾ ಚಾಕ್ ಪ್ರದೇಶ, ರಾಜೌರಿಯ ಮಂಜಕೋಟೆ ಪ್ರದೇಶ ಮತ್ತು ಪೂಂಚ್‌ನ ಸುರನ್‌ಕೋಟೆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಹೊಂಚುದಾಳಿ ವಿವರಗಳು:ಸೋಮವಾರ, ಕಥುವಾ ಜಿಲ್ಲಾ ಕೇಂದ್ರದಿಂದ ಸರಿಸುಮಾರು 150 ಕಿಮೀ ದೂರದಲ್ಲಿರುವ ಬದ್ನೋಟಾ ಗ್ರಾಮದ ಬಳಿಯ ಮಚೇಡಿ-ಕಿಂಡ್ಲಿ-ಮಲ್ಹಾರ್ ಪರ್ವತದ ರಸ್ತೆಯಲ್ಲಿ ಭಯೋತ್ಪಾದಕರು ಗಸ್ತು ಪಡೆ ಮೇಲೆ ಹೊಂಚುದಾಳಿ ನಡೆಸಿದರು, ಇದರ ಪರಿಣಾಮವಾಗಿ ಐವರು ಸೇನಾ ಸಿಬ್ಬಂದಿಗಳು ಸಾವನ್ನಪ್ಪಿದರು ಮತ್ತು ಐವರು ಗಾಯಗೊಂಡಿದ್ದರು.
ದೋಡಾ ಶೋಧ ಕಾರ್ಯಾಚರಣೆ:ಮಂಗಳವಾರ ಸಂಜೆ ಗುಂಡಿನ ಚಕಮಕಿ ನಡೆದಿರುವ ದೋಡಾ ಜಿಲ್ಲೆಯ ಎತ್ತರದ ಪ್ರದೇಶಗಳಲ್ಲಿ ಮತ್ತೊಂದು ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡ ಇಬ್ಬರು ಭಯೋತ್ಪಾದಕರ ಪತ್ತೆಗಾಗಿ ಭದ್ರತಾ ಪಡೆಗಳು ಘಾಡಿ ಭಗವಾ ಅರಣ್ಯ ಪ್ರದೇಶದಲ್ಲಿ ಕೂಂಬಿಂಗ್ ನಡೆಸುತ್ತಿವೆ.
ಸ್ಥಳೀಯರಿಂದ ಭದ್ರತಾ ಪಡೆಗಳಿಗೆ ಬೆಂಬಲ:ಭಯೋತ್ಪಾದಕ ಬೆದರಿಕೆಗಳನ್ನು ಎದುರಿಸುತ್ತಿರುವವರು ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಭದ್ರತಾ ಪಡೆಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಭಯೋತ್ಪಾದನೆಯನ್ನು ಎದುರಿಸಲು ಮತ್ತು ಸಮುದಾಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಸಹಾಯದ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಖಚಿತ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
