ನವದೆಹಲಿ:ತಮಿಳುನಾಡಿಗೆ ದಿನಕ್ಕೆ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿರುವುದನ್ನು ಕರ್ನಾಟಕ ಸರ್ಕಾರ ಪ್ರಶ್ನಿಸಿರುವ ಹಿನ್ನೆಲೆಯಲ್ಲಿ ನಾಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನವದೆಹಲಿಯಲ್ಲಿ ಸಭೆ ನಡೆಸಲಿದೆ. ಹೀಗಾಗಿ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಮಹತ್ವದ ಬೆಳವಣಿಗೆಯೊಂದು ನಡೆಯುವ ಸಾಧ್ಯತೆ ಗೋಚರಿಸಿದೆ.
ರಾಜ್ಯದ ನಾಲ್ಕೂ ಕಾವೇರಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ತೀವ್ರವಾಗಿ ಕುಸಿದಿದ್ದು, ಈ ಸಂದರ್ಭದಲ್ಲಿ ನೀರು ಬಿಡುಗಡೆ ಸಾಧ್ಯ ಇಲ್ಲ ಎಂದಿದ್ದ ಕರ್ನಾಟಕ, ನಿಯಂತ್ರಣ ಸಮಿತಿ ಶಿಫಾರಸುಗಳನ್ನು ಮರುಪರಿಶೀಲಿಸಬೇಕು ಎಂದು ಕಾವೇರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿತ್ತು. ಜತೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೂ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು.
ಇದನ್ನೂ ಓದಿ:ಮಹಿಳೆಯರೇ ಹುಷಾರು: ‘ಶಕ್ತಿ’ ಮೀರಿ ಪ್ರಯಾಣಿಸುವ ಮುನ್ನ ಎಚ್ಚರಿಕೆ ಇರಲಿ..
ಏತನ್ಮಧ್ಯೆ, ಕರ್ನಾಟಕ ನೀರು ಹರಿಸುತ್ತಿಲ್ಲ ಎನ್ನುವುದನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ತಮಿಳುನಾಡು ನಿರ್ಧರಿಸಿದೆ. ನಾಳೆಯಿಂದಲೇ ಸಂಸತ್ತಿನ ವಿಶೇಷ ಅಧಿವೇಶನ ಶುರುವಾಗುತ್ತಿದ್ದು, ರಾಜ್ಯದ ಸರ್ವಪಕ್ಷಗಳ ನಿಯೋಗ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ನೇತೃತ್ವದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿದೆ. ಸೂಕ್ತ ಪ್ರಮಾಣದಲ್ಲಿ ನೀರು ಬಿಡುಗಡೆಗೆ ಕರ್ನಾಟಕಕ್ಕೆ ಸೂಚನೆ ನೀಡಬೇಕು ಎಂದು ತಮಿಳುನಾಡು ಒತ್ತಾಯಿಸಲಿದೆ.
ಕುಟುಂಬಕ್ಕೆ ಶಾಂತಿ-ಯಶಸ್ಸು ಬರುತ್ತೆ ಅಂತ ಹೇಳಿ ಮಹಿಳೆಯೊಬ್ಬಳ ಮೇಲೆ ಐವರಿಂದ ಮತ್ತೆ ಮತ್ತೆ Aತ್ಯಾಚಾರ!

ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − 8 =
Remember me
