ಬೆಂಗಳೂರು:ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಲಾಗುತ್ತಿರುವ ವಿಚಾರವಾಗಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಸ್ಟಾರ್ ನಟರ್ಯಾರೂ ಮಾತನಾಡುತ್ತಿಲ್ಲ ಎಂಬ ಅಸಮಾಧಾನವೊಂದು ವ್ಯಕ್ತವಾಗಿದೆ.
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾದ ಅನಿವಾರ್ಯತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾತುಕತೆಯಲ್ಲಿ ತೊಡಗಿದ್ದು, ಸರ್ವಪಕ್ಷಗಳ ಸಭೆ ಇತ್ಯಾದಿಯನ್ನೂ ಕೈಗೊಂಡಿದೆ. ಅದಾಗ್ಯೂ ವಿವಾದ ಇನ್ನೂ ಬಗೆಹರಿದಿಲ್ಲ. ಈ ಕುರಿತು ರಾಜಕೀಯ ವಾಗ್ದಾಳಿಗಳು ನಡೆಯುತ್ತಿದ್ದು, ಇದೀಗ ಅದು ಚಿತ್ರರಂಗದತ್ತವೂ ತಿರುಗಿದೆ.
ಕನ್ನಡ ಚಿತ್ರರಂಗದವರು ಈ ಕುರಿತು ದನಿಗೂಡಿಸುತ್ತಿಲ್ಲ ಎಂದು ಕನ್ನಡರಪ ಸಂಘಟನೆಗಳ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ದನಿ ಎತ್ತಿದ್ದಾರೆ. ಈ ಬಗ್ಗೆ ನಟ ಹಾಗೂ ರಾಜ್ಯಸಭಾ ಸದಸ್ಯ ದನಿಗೂಡಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಆ ಬಗ್ಗೆ ತಮ್ಮ ನಿಲುವನ್ನೂ ಪ್ರಕಟಿಸಿದ್ದಾರೆ.
ನಾನು ಕನ್ನಡ ಚಿತ್ರರಂಗದಲ್ಲಿ 42 ವರ್ಷ ಕಾಲ ಸೇವೆ ಸಲ್ಲಿಸಿ ಕನ್ನಡಿಗರ ಪ್ರೀತಿ-ಅಭಿಮಾನಕ್ಕೆ ಪಾತ್ರನಾಗಿದ್ದೇನೆ. ತಿಂಗಳ ಹಿಂದೆ ಕರ್ನಾಟಕ ರಾಜ್ಯ ಸರ್ಕಾರ ಕರೆದಿದ್ದ ಸರ್ವಪಕ್ಷ ಸಭೆಗೆ ಹಾಜರಾಗಿ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಡಿಕೆಶಿ ಅವರ ಮುಂದೆ ಕಾವೇರಿ ನದಿಯ ನೀರಿನ ವಿಚಾರವಾಗಿ ನಮ್ಮ ಬೆಂಬಲ ಸದಾ ಕನ್ನಡಿಗರ ಪರವಾಗಿಯೇ ಇದೆ ಎಂದು ತಿಳಿಸಿ ಬಂದಿದ್ದೆ. ನಾಳೆ ದೆಹಲಿಯಲ್ಲಿ ಕರ್ನಾಟಕ ಸರ್ವಪಕ್ಷ ಸಭೆ ಆಯೋಜಿಸಲಾಗಿದೆ, ಅದರಲ್ಲೂ ಭಾಗಿಯಾಗಿ “ಕಾವೇರಿ ನದಿಯ” ಪರವಾಗಿ ಹಾಗೂ ಕನ್ನಡದ ರೈತರ ಪರವಾಗಿ ನನ್ನ ಧ್ವನಿಯನ್ನು ಪ್ರಸ್ತಾಪಿಸುತ್ತೇನೆ ಎಂದು ಜಗ್ಗೇಶ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾನು ಕನ್ನಡ ಚಿತ್ರರಂಗದಲ್ಲಿ 42 ವರ್ಷಕಾಲ ಸೇವೆಸಲ್ಲಿಸಿ ಕನ್ನಡಿಗರಪ್ರೀತಿ ಅಭಿಮಾನಕ್ಕೆ ಪಾತ್ರನಾಗಿದ್ದೇನೆ🙏 ತಿಂಗಳ ಹಿಂದೆ ಕರ್ನಾಟಕ ರಾಜ್ಯ ಸರ್ಕಾರ ಕರೆದಿದ್ದ#ಸರ್ವಪಕ್ಷಸಭೆಗೆಹಾಜರಾಗಿ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಡಿಸಿಎಂ ಡಿಕೆಶಿ ರವರ ಮುಂದೆ ಕಾವೇರಿ ನದಿಯ ನೀರಿನ ವಿಚಾರವಾಗಿ ನಮ್ಮ ಬೆಂಬಲ ಸದಾ ಕನ್ನಡಿಗರ ಪರವಾಗಿಯೇ ಇದೆ ಎಂದು…pic.twitter.com/XTDFAfBSql
— ನವರಸನಾಯಕ ಜಗ್ಗೇಶ್ (@Jaggesh2)September 19, 2023

ಚೈತ್ರಾ ಕುಂದಾಪುರ ರಿಲ್ಯಾಕ್ಸ್, ಹಾಲಶ್ರೀ ಸ್ವಾಮೀಜಿಗೆ ಫುಲ್ ಟೆನ್ಷನ್?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 3 =
Remember me
