ಹೈದರಾಬಾದ್​:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್​ ನೇತೃತ್ವದ ಭಾರತ ರಾಷ್ಟ್ರ ಸಮಿತಿ ಪಕ್ಷದಲ್ಲಿ ತುಸು ಹೆಚ್ಚು ಎಂದು ಹೇಳಬಹುದು.
ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಭಾರತ ರಾಷ್ಟ್ರ ಸಮಿತಿ ಪಕ್ಷ ಮಂಗಳವಾರ ತೆಲಂಗಾಣದ 115 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ನವದೆಹಲಿಯಲ್ಲಿರುವ ತೆಲಂಗಾಣ ಭವನದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಸಿಎಂ ಕೆಸಿಆರ್​ ಬಿಡುಗಡೆ ಮಾಡಿದ್ದಾರೆ.
రానున్న తెలంగాణ శాసనసభ ఎన్నికలకు బీఆర్ఎస్ పార్టీ అభ్యర్థుల మొదటి జాబితాను (115 స్థానాలకు) ప్రకటించిన పార్టీ అధినేత, ముఖ్యమంత్రి శ్రీ కేసీఆర్‌.BRS Party Chief, CM Sri KCR announced the first list of BRS candidates (115 constituencies) for the forthcoming Telangana Assembly…pic.twitter.com/LNLohVSRVm
ಇದನ್ನೂ ಓದಿ:VIDEO| ಕಬಡ್ಡಿ ಪಂದ್ಯದ ವೇಳೆ ಘರ್ಷಣೆ; ಮೂವರ ಸ್ಥಿತಿ ಗಂಭೀರ
ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಸಿಎಂ ಕೆಸಿಆರ್​ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು 119ರ ಪೈಕಿ 95-105 ಸ್ಥಾನಗಳನ್ನು ಗೆಲ್ಲುತ್ತದೆ. ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದ್ದು, ಸ್ಥಳೀಯ ಮುಖಂಡರ ಅಭಿಪ್ರಾಯಕ್ಕೆ ಹೆಚ್ಚಿನ ಮಣೆ ಹಾಕಲಾಗಿದೆ. ಹೈದರಾಬಾದ್​ ಸಂಸದ ಅಸಾದುದ್ದೀನ್​ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷದ ಜೊತೆಗಿನ ನಮ್ಮ ಸಂಬಂಧ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಕೆಸಿಆರ್​ ಗಜ್ವೇಲ್​ ಮತ್ತು ಕಾಮರೆಡ್ಡಿ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದು, ಅವರ ಪುತ್ರ ಸಚಿವ ಕೆಟಿಆರ್​ ಸಿರ್ಸಿಲಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಕಮ್ಮಂ ಜಿಲ್ಲೆಯ ವೈರಾ ವಿಧಾನಸಭಾ ಕ್ಷೇತ್ರದಿಂದ ಬಾನೋತ್​ ಮದನ್​ಲಾಲ್​ ಅವರಿಗೆ ಟಿಕೆಟ್​ ನೀಡಲಾಗಿದೆ. ಇತ್ತೀಚಿಗೆ ಅವರು ಮಹಿಳೆಯೊಂದಿಗಿರುವ ಖಾಸಗಿ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + nine =
Remember me
