ಹೈದರಾಬಾದ್​:ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು ಕೂಡ ಮುಖ್ಯಮಂತ್ರಿಯಾಗಿ ಅವರನ್ನು ಸ್ವಾಗತಿಸಲು ಮಾತ್ರ ತೆಲಂಗಾಣ ಮುಖ್ಯಮಂತ್ರಿ ಬಾರದೇ ಮತ್ತೊಮ್ಮೆ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ.
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಎರಡು ದಿನಗಳ ಕಾಲ ತೆಲಂಗಾಣ ಪ್ರವಾಸ ಕೈಗೊಂಡಿರುವ ಪ್ರಧಾನಿ ಶನಿವಾರ ದೆಹಲಿಯಿಂದ ಆಗಮಿಸಿದ್ದಾರೆ.ಆದರೆ ಈ ವೇಳೆಯೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಗೈರಾಗಿದ್ದರು. ಅವರ ಬದಲಾಗಿ ಸಚಿವರು ಪ್ರಧಾನಿ ಅವರನ್ನು ಸ್ವಾಗತಿಸಿದರು.

ಪ್ರಧಾನಿ ಆಗಮನಕ್ಕೂ ಕೆಲವೇ ಗಂಟೆಗಳ ಮುನ್ನ ಕಾಂಗ್ರೆಸ್​ ರಾಷ್ಟ್ರಪತಿ ಅಭ್ಯರ್ಥಿ ಯಶ್ವಂತ್​ ಸಿನ್ಹಾ ಅವರನ್ನು ಸ್ವಾಗತಿಸಲು ಕೆಸಿಆರ್​ ಇದೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ ಪ್ರಧಾನಿ ಆಗಮನದ ವೇಳೆ ಬಂದಿರಲಿಲ್ಲ.
ಕೈ ರಾಷ್ಟ್ರಪತಿ ಅಭ್ಯರ್ಥಿ ಯಶ್ವಂತ್​ ಸಿನ್ಹಾ ಅವರಿಗೆ ಬೆಂಬಲ ಸೂಚಿಸಿರುವುದರಿಂದಲೇ ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಆಗಮಿಸಲ್ಲ ಎಂಬ ಮಾತು ಕೇಳಿಬರುತ್ತಿದೆ. ಕಳೆದ ಆರು ತಿಂಗಳಲ್ಲಿ ಇದು ಮೂರನೇ ಬಾರಿ ಕೆಸಿಆರ್​ ಅವರಿಂದ ಶಿಷ್ಟಾಚಾರ ಉಲ್ಲಂಘನೆಯಾಗಿದೆ.(ಏಜೆನ್ಸೀಸ್​) ​
ಮಾಜಿ ಸಿಎಂ, ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಎನ್​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ?

ಹಿಂದೂ ದೇವತೆ ಬಗ್ಗೆ ಆಕ್ಷೇಪಾರ್ಹ ಟ್ವೀಟ್​​: ಜುಬೇರ್​ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × one =
Remember me
