ಹೈದರಾಬಾದ್:ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ಕೆಸಿಆರ್ ಪಕ್ಷದ ಸಂಸದ ಕೋಠಾ ಪ್ರಭಾಕರ್ ರೆಡ್ಡಿ ಅವರಿಗೆ ಅಪರಿಚಿತ ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ:ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಬಿಡುಗಡೆಗೆ ಯತ್ನ: ಕುಟುಂಬಗಳಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭರವಸೆರೆಡ್ಡಿ ಪಾದ್ರಿಯೊಬ್ಬರ ಮನೆಗೆ ಮತ ಕೇಳಲು ತೆರಳುತ್ತಿದ್ದ ವೇಳೆ ದಾಳಿ ನಡೆದಿದೆ. ಅವರ ಬಳಿ ಬಂದ ಅಪರಿಚಿತ ವ್ಯಕ್ತಿ ಕೈಕುಲುಕಲು ಮುಂದಾಗಿದ್ದಾನೆ. ಆಗ ಅವರು ಕೈ ಮುಂದೆ ಚಾಚುತ್ತಿದ್ದಂತೆ ಅವನು ಇದ್ದಕ್ಕಿದ್ದಂತೆ ಚಾಕುವನ್ನು ಹೊರತೆಗೆದು ಹೊಟ್ಟೆಗೆ ಇರಿದಿದ್ದಾನೆ. ಈ ಸಂದರ್ಭ ಬಿಆರ್‌ಎಸ್ ಕಾರ್ಯಕರ್ತರು ದಾಳಿಕೋರನನ್ನು ಹಿಡಿದು ಥಳಿಸಿದ್ದಾರೆ.
ಚಾಕುವಿನಿಂದ ಇರಿದ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆತನ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಸಿದ್ದಿಪೇಟೆ ಪೊಲೀಸ್ ಆಯುಕ್ತ ಎನ್.ಶ್ವೇತಾ ತಿಳಿಸಿದ್ದಾರೆ.
ಮೇದಕ್ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ರೆಡ್ಡಿ ಅವರ ಹೊಟ್ಟೆಗೆ ಗಂಭೀರ ಗಾಯವಾಗಿದ್ದು, ಗಜ್ವೇಲ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ನ.30 ರಂದು ತೆಲಂಗಾಣದಲ್ಲಿ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು 2014 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮೇದಕ್​ ಕ್ಷೇತ್ರವನ್ನು ಬಿಟ್ಟುಕೊಟ್ಟ ನಂತರ ರೆಡ್ಡಿ ಅವರು ಸಂಸದರಾಗಿ ಆಯ್ಕೆಯಾಗಿದ್ದಾರೆ.
ಕಾರ್ಮಿಕನನ್ನು ಹತ್ಯೆ ಮಾಡಿದ ಉಗ್ರರು; 24 ಗಂಟೆಗಳಲ್ಲಿ ಕಾಶ್ಮೀರದಲ್ಲಿ ನಡೆದ ಎರಡನೇ ಭಯೋತ್ಪಾದಕ ಘಟನೆಯಿದು

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:twelve − 6 =
Remember me
