ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಶುಕ್ರವಾರ ವಾಟ್ಸಾಪ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧನದಲ್ಲಿರುವ ತನ್ನ ಪತಿಯನ್ನು ಬೆಂಬಲಿಸುವಂತೆ ಜನರನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಕ್ರಿಸ್ತನ ತ್ಯಾಗ ಸ್ಮರಿಸಿದ ಪ್ರಧಾನಿ ಮೋದಿ
ಡಿಜಿಟಲ್ ಮೀಡಿಯಾ ಬ್ರೀಫಿಂಗ್‌ನಲ್ಲಿ, ಸುನೀತಾ ಕೇಜ್ರಿವಾಲ್ ಅವರು ತಮ್ಮ ಪತಿ ದೇಶದ “ಅತ್ಯಂತ ಭ್ರಷ್ಟ ಮತ್ತು ಸರ್ವಾಧಿಕಾರಿ ಶಕ್ತಿಗಳಿಗೆ” ಸವಾಲು ಹಾಕಿದ್ದಾರೆ. ಜನರು ತಮ್ಮ ಆಶೀರ್ವಾದ ಮತ್ತು ಪ್ರಾರ್ಥನೆಯ ಮೂಲಕ ಅವರನ್ನು ಬೆಂಬಲಿಸುವಂತೆ ಕೇಳಿಕೊಂಡಿದ್ದಾರೆ.
ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಿಗೆ ಜನರು ತಮ್ಮ ಆಶೀರ್ವಾದ, ಪ್ರಾರ್ಥನೆ ಅಥವಾ ಇತರ ಯಾವುದೇ ಸಂದೇಶಗಳನ್ನು ಕಳುಹಿಸಬಹುದು. ಅದನ್ನು ಅವರಿಗೆ ತಿಳಿಸುವುದಾಗಿ ಅವರು ವಾಟ್ಸಾಪ್ ಸಂಖ್ಯೆ – 8297324624 ಅನ್ನು ನೀಡಿದ್ದಾರೆ.
ದೆಹಲಿಯಲ್ಲಿ ಈಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಗುರುವಾರ ನ್ಯಾಯಾಲಯವು ಅವರ ಇಡಿ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದೆ.
‘ನನ್ನ ಹೆಂಡ್ತಿ ಹಾಗೇ.. ಅದು ಗೊತ್ತಾದಾಗ ಅವಳನ್ನು ಬಿಟ್ಟು ಹೋಗ್ಬೇಕು ಎನ್ನಿಸ್ತು’.. : ಪುರಿ ಜಗನ್ನಾಥ್ ಶಾಕಿಂಗ್ ಕಾಮೆಂಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 14 =
Remember me
