ದೆಹಲಿ:ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ದೆಹಲಿ ಮುಖ್ಯಮಂತ್ರಿ, ಆಮ್​ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್​ ಕೇಜ್ರಿವಾಲ್​ ಬೆಂಬಲ ಸೂಚಿಸಿದ್ದಾರೆ.
ಈ ಕುರಿತು ಹೇಳಿಕೆಯನ್ನ ಬಿಡುಗಡೆ ಮಾಡಿರುವ ಕೇಜ್ರಿವಾಲ್​​ ವಿರೋಧ ಪಕ್ಷಗಳ ಮುಖಂಡರನ್ನ ನಿರ್ಮೂಲನೆ ಮಾಡಲು ಬಿಜೆಪಿ ಸರ್ಕಾರ ಹೊರಟಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯೇತರ ಪಕ್ಷಗಳು ಹಾಗೂ ಮುಖಂಡರ ವಿರುದ್ದ ಕಾನೂನು ಕ್ರಮ ಜರುಗಿಸುವ ಮೂಲಕ ಅವರನ್ನ ಇಲ್ಲವಾಗಿಸಲು ಪಿತೂರಿ ನಡೆಸಲಾಗಿದೆ. ಕಾಂಗ್ರೆಸ್​​ ಪಕ್ಷದ ಜೊತೆ ನಮಗೆ ಕೆಲವು ಭಿನ್ನಾಭಿಪ್ರಾಯವಿರಬಹುದು. ಆದರೆ, ಮಾನನಷ್ಟ ಮೊಕದ್ದಮೆಯಂತಹ ಪ್ರಕರಣದಲ್ಲಿ ರಾಹುಲ್​ ಗಾಂಧಿಯವರನ್ನ ಸಿಲುಕಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.
ನ್ಯಾಯಾಲಯದ ತೀರ್ಪನ್ನ ನಾವು ಗೌರವಿಸುತ್ತೇವೆ. ಆದರೆ, ಈ ನಿರ್ಣಯಕ್ಕೆ ನನ್ನ ಸಹಮತವಿಲ್ಲ ಎಂದು ಅರವಿಂದ್​​ ಕೇಜ್ರಿವಾಲ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 8 =
Remember me
