ನವದೆಹಲಿ:ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ವಿರುದ್ಧದ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.
ದೆಹಲಿಯ ಬಾದರ್​ಪುರದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜಮ್ಮುಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್​ 370ನ್ನು ಕೇಂದ್ರ ಸರ್ಕಾರ ರದ್ದು ಮಾಡಿದ್ದರಿಂದ ಪಾಕಿಸ್ತಾನ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ತುಂಬ ನೋವಾಗಿದೆ ಎಂದು ಸಿಎಂ ಯೋಗಿ ವ್ಯಂಗ್ಯವಾಡಿದ್ದಾರೆ.
ಒಂದೆಡೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಅಭಿವೃದ್ಧಿ, ರಾಷ್ಟ್ರೀಯತೆಗಳು ಇದ್ದರೆ ಮತ್ತೊಂದೆಡೆ ದೇಶ ಒಡೆಯುವ ಶಕ್ತಿಗಳನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಮತ್ತು ಅರವಿಂದ್​ ಕೇಜ್ರಿವಾಲ್​ ಇದ್ದಾರೆ. ದೆಹಲಿ ಚುನಾವಣೆಯಲ್ಲಿ ಮತ ಹಾಕುವ ಜನರು ಯೋಚಿಸಿ ಆಯ್ಕೆ ಮಾಡಿಕೊಳ್ಳಬೇಕು ಎಂದಿದ್ದಾರೆ.
ಬಿಜೆಪಿ ಭಯೋತ್ಪಾದನೆಯೆಡೆಗೆ ಶೂನ್ಯ ಸಹಿಷ್ಣುತಾ ಮನೋಭಾವ ಹೊಂದಿದೆ. ಆದರೆ ಕೇಜ್ರಿವಾಲ್​ ಶಾಹೀನ್​ಬಾಗ್​ನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರಿಗೆ ಬಿರ್ಯಾನಿ ವ್ಯವಸ್ಥೆ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಕಿಡಿಕಾರಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
