ನವದೆಹಲಿ:ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ತಮ್ಮ ಬಂಧನವನ್ನು ಖಂಡಿಸಿ ಹೈಕೋರ್ಟ್​ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದ್ದು, ಸುಪ್ರೀಂ ಕೋರ್ಟ್​ ಮೆಟ್ಟಿಲೇರಲು ಸಜ್ಜಾಗಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಸೌರಭ್​ ಭಾರದ್ವಾಜ್​, ನಾವು ಹೈಕೋರ್ಟ್‌ ತೀರ್ಮಾನವನ್ನು ಗೌರವಿಸುತ್ತೇವೆ. ಅದರೆ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲಿದ್ದೇವೆ. ಅಬಕಾರಿ ನೀತಿ ಜಾರಿಯಲ್ಲಿ ನಡೆದಿದೆ ಎನ್ನಲಾದ ಅಬಕಾರಿ ನೀತಿ ಹಗರಣವು ದೊಡ್ಡ ರಾಜಕೀಯ ಪಿತೂರಿಯಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಐಪಿಎಲ್​ನಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ; ಈ ಅಪರೂಪದ ಮೈಲಿಗಲ್ಲು ಸಾಧಿಸಿದ ಮೊದಲ ಕ್ರಿಕೆಟಿಗ
ಈ ಹಗರಣದಲ್ಲಿ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ತಂಡವೋ ಒಂದೇ ಒಂದು ರೂಪಾಯಿ ಅಕ್ರಮ ಹಣವನ್ನು ಪತ್ತೆ ಮಾಡಲು ವಿಫಲವಾಗಿದೆ. ಅರವಿಂದ ಕೇಜ್ರಿವಾಲ್ ಅವರನ್ನು ಮುಗಿಸುವ ಮತ್ತು ದೆಹಲಿ ಹಾಗೂ ಪಂಜಾಬ್‌ನಲ್ಲಿರುವ ಎಎಪಿ ಸರ್ಕಾರವನ್ನು ಹತ್ತಿಕ್ಕಲು ಮಾಡಿರುವ ರಾಜಕೀಯ ಪಿತೂರಿ ಇದು ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಎಎಪಿ ರಾಜ್ಯಸಭಾ ಸಂಸದ ಸಂಜಯ್‌ ಸಿಂಗ್ ಅವರಿಗೆ ಜಾಮೀನು ಲಭಿಸಿದಂತೆಯೇ ಕೇಜ್ರಿವಾಲ್ ಅವರಿಗೂ ಸುಪ್ರೀಂ ಕೋರ್ಟ್‌ನಲ್ಲಿ ರಿಲೀಫ್ ಸಿಗಲಿದೆ. ನ್ಯಾಯಾಂಗದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವ ಸೌರಭ್​ ಭಾರಧ್ವಾಜ್​ ಹೇಳಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:14 + 17 =
Remember me
