ಬೆಂಗಳೂರು:‘ಪ್ರಗತಿಯ ಪ್ರತಿಮೆ’ ಎಂಬ ಹೆಸರಿನಲ್ಲಿ ಸ್ಥಾಪಿತಗೊಂಡಿರುವ, ರಾಜಧಾನಿ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ಗೆ ಪಾತ್ರವಾಗಿದೆ.
ಪಟ್ಟಣವನ್ನು ನಿರ್ಮಿಸಿದವರ ಹೆಸರಿನಲ್ಲಿ ಸ್ಥಾಪನೆಗೊಂಡಿರುವ ಪ್ರಥಮ ಹಾಗೂ ಅತಿ ಎತ್ತರದ ಕಂಚಿನ ಪ್ರತಿಮೆ ಇದಾಗಿದೆ ಎಂದು ಲಂಡನ್​ನ ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ ಈ ಪ್ರಗತಿಯ ಪ್ರತಿಮೆಯನ್ನು ಪರಿಗಣಿಸಿದೆ. ಈ ಪ್ರತಿಮೆಯು 108 ಅಡಿ ಎತ್ತರವಿದ್ದು, 4 ಟನ್ ತೂಕದ ಖಡ್ಗವನ್ನೂ ಹೊಂದಿದೆ.

“ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ” ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಂತಸವನ್ನು ಹಂಚಿಕೊಂಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನ. 11ರಂದು ಈ ಪ್ರಗತಿಯ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತಕ್ಕೀಡಾಗಿ ಸಾವು!

ಟ್ವಿಟರ್​ ಬಳಿಕ ಮೆಟಾದಲ್ಲೂ ಜಾಬ್​ಕಟ್​; 11 ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ತೆಗೆಯಲಿದ್ದಾರೆ ಮಾರ್ಕ್​ ಜುಕರ್​ಬರ್ಗ್​!

ಹೋಟೆಲ್ ಕಾರ್ಮಿಕನಿಗೆ 55 ಕೋಟಿ ರೂಪಾಯಿ ಜಾಕ್​ಪಾಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − seven =
Remember me
