ಪಟನಾ:ಬಿಹಾರ ರಾಜಧಾನಿ ಪಟನಾದ ರೈಲು ನಿಲ್ದಾಣದಲ್ಲಿ ತನ್ನ ಪೋರ್ನ್​ ವಿಡಿಯೋ ವೈರಲ್​ ಆಗಿರುವುದು ನೀಲಿತಾರೆ ಕೇಂದ್ರ ಲಸ್ಟ್​ ಗಮನಕ್ಕೆ ಬಂದಿದ್ದು, ಘಟನೆಯ ಬಗ್ಗೆ ನಿಗೂಢ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಇಂಡಿಯಾ ಎಂದು ಇಂಗ್ಲಿಷ್​ನಲ್ಲಿ ಬರೆದು ನೇರಳೆ ಬಣ್ಣದ ಟಾಪ್​ ಧರಿಸಿರುವ ಫೋಟೋ ಪೋಸ್ಟ್​ ಮಾಡಿ ಬಿಹಾರ ರೈಲ್ವೆ ನಿಲ್ದಾಣ (#BiharRailwayStation) ಎಂದು ಹ್ಯಾಷ್​ಟ್ಯಾಗ್​ ಹಾಕಿ ನಿಗೂಢವಾಗಿ ಟ್ವೀಟ್​ ಮಾಡಿದ್ದಾರೆ. ಕೇಂದ್ರ ಲಸ್ಟ್​ ಮಾಡಿರುವ ಟ್ವೀಟ್​ ಅನ್ನು 4 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. 14 ಸಾವಿರ ಮಂದಿ ಟ್ವಿಟ್​ ಅನ್ನು ಲೈಕ್ಸ್​ ಮಾಡಿದ್ದು, ಸಾವಿರಕ್ಕೂ ಅಧಿಕ ಮಂದಿ ಟ್ವೀಟ್​ ಅನ್ನು ರೀಟ್ವೀಟ್​ ಮಾಡಿದ್ದಾರೆ. ಸುಮಾರು 600ಕ್ಕೂ ಅಧಿಕ ಮಂದಿ ಲಸ್ಟ್​ ಅವರು ಟ್ವೀಟ್​ಗೆ ಬಗೆ ಬಗೆಯ ಕಾಮೆಂಟ್​ ಮಾಡಿದ್ದಾರೆ.
ಇದನ್ನೂ ಓದಿ:ಮೊಬೈಲ್​ನಲ್ಲಿ ಮಾತನಾಡ್ತಿದ್ದ ಮಹಿಳೆಗೆ ಮುತ್ತಿಟ್ಟು ಪರಾರಿಯಾಗಿದ್ದ ನಟೋರಿಯಸ್​ ಸೀರಿಯಲ್​ ಕಿಸ್ಸರ್ ಅಂದರ್​!

ಘಟನೆ ಹಿನ್ನೆಲೆ ಏನು?ಬಿಹಾರದ ಪಟನಾ ರೈಲು ನಿಲ್ದಾಣದಲ್ಲಿ ಅಳವಡಿಸಿದ್ದ ಟಿ.ವಿ. ಪರದೆಯಲ್ಲಿ ಮೂರು ನಿಮಿಷಗಳ ಕಾಲ ನೀಲಿ ಚಿತ್ರ ಪ್ರದರ್ಶನಗೊಂಡ ಘಟನೆ ಮಾ.19ರ ಬೆಳಗ್ಗೆ 9.30ರ ಸುಮಾರಿಗೆ ನಡೆಯಿತು. ಈ ಘಟನೆಯಿಂದ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಮುಜುಗರಕ್ಕೊಳಗಾದರು. ಟಿವಿಯಲ್ಲಿ ನೀಲಿಚಿತ್ರ ಪ್ರದರ್ಶನವಾಗುತ್ತಿದ್ದಂತೆ ಪ್ರಯಾಣಿಕರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಅಧಿಕಾರಿಗಳು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್‌ಪಿಎಫ್)ಗೆ ದೂರು ಸಲ್ಲಿಸಿದರು.
ಇದನ್ನೂ ಓದಿ:ನಿಧಿಗಾಗಿ ಅಮಾವಾಸ್ಯೆಯಂದು ಬಾಣಂತಿ ಹತ್ಯೆ?! ಮನೆಯಿಂದ ಅನತಿ ದೂರದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ
ದೂರು ದಾಖಲಿಸಿಕೊಂಡ ಆರ್​ಪಿಎಫ್ ಅಧಿಕಾರಿಗಳು, ಟಿ.ವಿಯಲ್ಲಿ ಜಾಹೀರಾತು ಪ್ರದರ್ಶಿಸುವ ಜವಾಬ್ದಾರಿ ವಹಿಸಿಕೊಂಡ ದತ್ತಾ ಕಮ್ಯುನಿಕೇಷನ್ ಸಂಸ್ಥೆಯನ್ನು ಸಂಪರ್ಕಿಸಿ ನೀಲಿ ಚಿತ್ರ ಪ್ರದರ್ಶನವಾಗುತ್ತಿರುವುದನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಬಳಿಕ ರೈಲ್ವೇ ಅಧಿಕಾರಿಗಳು ದತ್ತಾ ಕಮ್ಯುನಿಕೇಷನ್ ವಿರುದ್ಧ ಎಫ್ಐಆರ್ ದಾಖಲಿಸಿ, ದಂಡ ವಿಧಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೇ ಅಧಿಕಾರಿಗಳು, ನಿಲ್ದಾಣದಲ್ಲಿ ಟಿ.ವಿ ಪರದೆಯ ಮೇಲೆ ಜಾಹೀರಾತುಗಳನ್ನು ಪ್ರಸಾರ ಮಾಡಲು ಏಜೆನ್ಸಿಗೆ ನೀಡಲಾಗಿದ್ದ ಗುತ್ತಿಗೆಯನ್ನು ರದ್ದುಗೊಳಿಸಿದ್ದಾರೆ ಎಂದು ವರದಿಯಾಗಿದೆ.(ಏಜೆನ್ಸೀಸ್​)
ರೈಲು ನಿಲ್ದಾಣದ ಟಿ.ವಿ ಪರದೆಯಲ್ಲಿ ಪ್ರದರ್ಶನವಾದ ನೀಲಿ ಚಿತ್ರ; ಮುಜುಗರಕ್ಕೊಳಗಾದ ಪ್ರಯಾಣಿಕರು

ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ 10 ಸೆಕೆಂಡ್​ನಲ್ಲಿ ಫೋಟೋದಲ್ಲಿರೋ ಗೂಬೆ ಪತ್ತೆ ಮಾಡಬಲ್ಲರು!

ಗದಗ ಜಿಲ್ಲೆಯ ಚೆಕ್ ಪೋಸ್ಟ್​​ನಲ್ಲಿ 4 ಕೆ.ಜಿ ಚಿನ್ನಾಭರಣ ಜಪ್ತಿ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:16 − 4 =
Remember me
