ತಿರುವನಂತಪುರ: ಕೊವಿಡ್​-19 ಸೋಂಕು ನಿಯಂತ್ರಣಕ್ಕಾಗಿ ಕೇರಳ ಸರ್ಕಾರ ಇನ್ನೊಂದು ಪ್ರಮುಖ ನಿರ್ಧಾರ ಕೈಗೊಂಡಿದೆ.ರಾಜ್ಯದಲ್ಲಿ ಇನ್ನುಮುಂದೆ ಎಲ್ಲಿಯೂ ರಸ್ತೆ ಬದಿ ಮೀನು ಮಾರಾಟ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಮೀನುಗಾರಿಕಾ ಸಚಿವರಾದ ಜೆ.ಮರ್ಸಿಕುಟ್ಟಿ ಅಮ್ಮಾ ಈ ಸೂಚನೆ ನೀಡಿದ್ದು, ರಸ್ತೆ ಬದಿ ಅಲ್ಲಲ್ಲಿ ಕುಳಿತು ಮೀನು ಮಾರಾಟ ಮಾಡುತ್ತಿರುವವರು ಈಗಲೇ ನಿಲ್ಲಿಸಬೇಕು ಎಂದಿದ್ದಾರೆ.
ಕೊವಿಡ್​-19 ಸೋಂಕಿನ ಭಯದಿಂದಾಗಿ ಮೀನು ಮಾರುಕಟ್ಟೆಗಳನ್ನು ಮುಚ್ಚಲಾಗಿತ್ತು. ಆದರೆ ಈಗ ಕರೊನಾ ನಿಯಂತ್ರಣಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಂಡು, ಮತ್ತೆ ಮಾರುಕಟ್ಟೆಗಳನ್ನು ತೆರೆಯಲು ನಿರ್ಧಾರ ಮಾಡಲಾಗಿದೆ. ಮೀನುಗಾರರ ಒಕ್ಕೂಟ ಮತ್ತು ಮೀನುಗಾರಿಕಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಎನ್​ಜಿಒಗಳು, ಮೀನು ಮಾರಾಟ ಮಾಡಲು ಅನುಮತಿ ನೀಡಿ ಎಂದು ಸರ್ಕಾರಕ್ಕೆ ಮನವಿ ಮಾಡಿವೆ. ಹಾಗಾಗಿ ಮೀನು ಮಾರುಕಟ್ಟೆಗಳನ್ನು ತೆರೆಯಲು ತೀರ್ಮಾನ ಮಾಡಲಾಗಿದೆ. ಆದರೆ ಕೆಲವು ಮಾರ್ಗಸೂಚಿಗಳನ್ನು ನೀಡಬೇಕಾಗಿದೆ. ಅಲ್ಲಿಯವರೆಗೆ ತಾತ್ಕಾಲಿಕವಾಗಿ ಈ ರಸ್ತೆ ಬದಿ ಮೀನು ಮಾರಾಟ ಮಾಡುತ್ತಿರುವವರು ನಿಲ್ಲಿಸಬೇಕು ಎಂದು ಸಚಿವರು ತಿಳಿಸಿದ್ದಾರೆ.
ಹೀಗಿದ್ದಾಗ್ಯೂ ಎಲ್ಲಾದರೂ ಈ ಮೀನು ಮಾರುಕಟ್ಟೆಗಳು ಕಾರ್ಯ ನಿರ್ವಹಿಸುತ್ತಿದ್ದರೆ ಸ್ಥಳೀಯ ಆಡಳಿತಗಳು ಅದನ್ನು ನಮ್ಮ ಗಮನಕ್ಕೆ ತರಬೇಕು ಎಂದೂ ತಿಳಿಸಿದ್ದಾರೆ. (ಏಜೆನ್ಸೀಸ್​)
25 ಅಡಿ ತಿಮಿಂಗಲದ ಬೇಟೆಯಾಡಿ ಪೀಸ್‌ಪೀಸ್‌ ಮಾಡಿದವರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + nine =
Remember me
