ತಿರುವನಂತಪುರ: ಕೇರಳದಲ್ಲಿ ಕರೊನಾ ವೈರಸ್​ ಸೋಂಕು ಸಮುದಾಯಕ್ಕೆ ಹರಡಿದಿದೆ ಎನ್ನುವ ಭೀತಿ ಜನರಲ್ಲಿ ವ್ಯಾಪಕವಾಗಿದೆ.
ರಾಷ್ಟ್ರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಹಾಗೂ ರಾಜ್ಯದಲ್ಲಿ 25 ಮಂದಿ ರೋಗಿಗಳ ಸೋಂಕು ಹರಡುವಿಕೆಯ ಮೂಲ ಪತ್ತೆಯಾಗದ ಹಿನ್ನೆಲೆಯಲ್ಲಿ ಜನರಲ್ಲಿ ಸೋಂಕು ಸಮುದಾಯಕ್ಕೆ ಹರಡಿದೆ ಎನ್ನುವ ಭೀತಿಗೆ ಕಾರಣವಾಗಿದೆ. ಕೇರಳದಲ್ಲಿ 4 ತಿಂಗಳ ಮಗು ಸೋಂಕಿಗೆ ಬಲಿಯಾಗಿರುವುದರಿಂದ  ಸಾರ್ವಜನಿಕರು ಭಯಗೊಂಡಿದ್ದಾರೆ.
ಸಮುದಾಯಕ್ಕೆ ಸೋಂಕು ನಿರಾಕರಿಸಿದ ಸಚಿವೆ: ರಾಜ್ಯದಲ್ಲಿ ಕರೊನಾ ವೈರಸ್​ ಸೋಂಕು ಸಮುದಾಯಕ್ಕೆ ಹರಡಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಕೂಡ ಗಮನ ಹರಿಸುತ್ತಿದೆ. ಸಮುದಾಯಕ್ಕೆ ಹರಡಿರುವ ಸೂಚನೆ ಇದುವರೆಗೆ ಬಂದಿಲ್ಲ ಎಂದು ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರು ಹೇಳಿದ್ದಾರೆ.
ಆರೋಗ್ಯ ಇಲಾಖೆ ಕೂಡ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಕರೊನಾ ಹಾಟ್​ಸ್ಪಾಟ್​ಗಳು ಇತರ ಭಾಗಗಳ ಮೇಲೆ ನಿಗಾ ವಹಿಸಿದ್ದೇವೆ. ಈಗಲೇ ಸೋಂಕು ಸಮುದಾಯಕ್ಕೆ ಹರಡಿದೆ ಎಂದು ಹೇಳಲು ಸಾಧ್ಯವಿಲ್ಲ ಇನ್ನಷ್ಟು ದಿನಗಳ ನಂತರ ತಿಳಿಯಲಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಕೇರಳದ ಕೊಲ್ಲಂ, ಕೊಟ್ಟಾಯಂ, ಇಡುಕ್ಕಿ ಮತ್ತು ಕೋಜಿಕೋಡ್​ ಜಿಲ್ಲೆಗಳಲ್ಲಿ ಐದು ದಿನಗಳಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ಇಡುಕ್ಕಿ ಜಿಲ್ಲಿಯಲ್ಲಿ ಎಲ್ಲ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಹೀಗಿದ್ದರೂ ಇಡುಕ್ಕಿಯಲ್ಲಿ ಲಾಕ್​ಡೌನ್​ ಸಿಡಿಲಗೊಳಿಸಿಲ್ಲ. ಹಾಟ್​ಸ್ಪಾಟ್​ಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್​)
ಕರೊನಾ ಸೋಂಕಿನಿಂದ ಚೇತರಿಸಿಕೊಂಡ ಪ್ರಧಾನಿ ಕೆಲಸಕ್ಕೆ ಹಾಜರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 2 =
Remember me
