ತಿರುವನಂತಪುರ:ವಯನಾಡಿನಲ್ಲಿ ಸಂಭವಿಸಬಹುದಾದ ಭೂಕುಸಿತ ಬಗ್ಗೆ ಕೇರಳ ಸರ್ಕಾರಕ್ಕೆ ಜುಲೈ 23ಕ್ಕೆ ಎಚ್ಚರಿಕೆ ನೀಡಲಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು (ಜುಲೈ 31 ) ಸಂಸತ್ತಿನಲ್ಲಿ ಹೇಳಿದ್ದರು. ಭೂ ಕುಸಿತ ಪೀಡಿತ ವಯನಾಡಿಗೆ ಕೇಂದ್ರ ಸರ್ಕಾರ ಒಮ್ಮೆಯೂ ರೆಡ್ ಅಲರ್ಟ್ ಸೂಚನೆ ನೀಡಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ರಾಜ್ಯದ ಜನತೆ ಪ್ರಶ್ನಿಸಬೇಕಾಗಿರುವುದು ನಮ್ಮನ್ನಲ್ಲ, ದಲಿತ ವಿರೋಧಿ ಕೇಂದ್ರ ಸರ್ಕಾರವನ್ನು: ಸಿಎಂ ಸಿದ್ದರಾಮಯ್ಯ
ಭಾರೀ ಮಳೆಯಿಂದಾಗಿ ಇಂತಹ ಭೂಕುಸಿತಗಳು ಸಂಭವಿಸಿ ಹಲವಾರು ಜನರನ್ನು ಬಲಿತೆಗೆದುಕೊಳ್ಳುವ ಮುನ್ನವೇ ರಾಜ್ಯ ಸರ್ಕಾರಕ್ಕೆ ಹವಾಮಾನ ಮುನ್ನೆಚ್ಚರಿಕೆಗಳನ್ನು ನೀಡಲಾಗಿತ್ತು ಎಂಬ ಅಮಿತ್ ಷಾ ಅವರ ಹೇಳಿಕೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ತಳ್ಳಿ ಹಾಕಿದ್ದಾರೆ.
ಇದಕ್ಕೆ ಸ್ಪಷ್ಟನೆ ನೀಡಿರುವ ಕೇರಳ ಸಿಎಂ, ಹವಾಮಾನ ಇಲಾಖೆಯ ಎಚ್ಚರಿಕೆಗಳ ಹೊರತಾಗಿಯೂ ಭೂ ಕುಸಿತಕ್ಕೂ ಮುನ್ನ ವಯನಾಡಿಗೆ ಯಾವುದೇ ರೆಡ್ ಅಲರ್ಟ್‌ಗಳನ್ನು ನೀಡಿರಲಿಲ್ಲ. ವಯನಾಡು ಜಿಲ್ಲೆಯಲ್ಲಿ 500 ಮಿಲಿಮೀಟರ್‌ಗೂ ಹೆಚ್ಚು ಮಳೆಯಾಗಿದ್ದು, ಭವಿಷ್ಯ ನುಡಿದಿದ್ದಕ್ಕಿಂತ ಹೆಚ್ಚು ತೀವ್ರ ಹವಾಮಾನವನ್ನು ಅನುಭವಿಸಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಸ್ಪಷ್ಟಪಡಿಸಿದ್ದಾರೆ.
ಹವಾಮಾನ ಇಲಾಖೆ ಕೇವಲ 6 ಸೆಂ.ಮೀ ಮತ್ತು 20 ಸೆಂ.ಮೀ ನಡುವಿನ ಮಳೆಯನ್ನು ಸೂಚಿಸುವ ಆರೆಂಜ್ ಅಲರ್ಟ್ ಮಾತ್ರ ನೀಡಲಾಗಿತ್ತು. ಆದರೆ 24 ಗಂಟೆಗಳಲ್ಲಿ 20 ಸೆಂ.ಮೀ ಗಿಂತ ಹೆಚ್ಚು ಭಾರೀ ಮಳೆಯನ್ನು ಸೂಚಿಸುವ ರೆಡ್ ಅಲರ್ಟ್ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಭೂಕುಸಿತ ಸಂಭವಿಸಿದ ನಂತರವೇ ವಯನಾಡು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಪಿಣರಾಯಿ ವಿಜಯನ್ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದು ಆರೋಪ ಮಾಡುವ ಸಮಯವಲ್ಲ ಎಂದು ಪಿಣರಾಯಿ ವಿಜಯನ್ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ್ದಾರೆ. ಇದುವರೆಗೆ 1,592 ಜನರನ್ನು ರಕ್ಷಿಸಲಾಗಿದೆ. ವಯನಾಡ್ ಜಿಲ್ಲೆಯಲ್ಲಿ 82 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. 2,017 ವ್ಯಕ್ತಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ವಯನಾಡು ಭೂಕುಸಿತ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:17 − 8 =
Remember me
