ತಿರುವನಂತಪುರಂ:ದೇವರ ನಾಡು ಕೇರಳದಲ್ಲಿ ಹೊಸ ವೈರಸ್​ ಕಾಣಿಸಿಕೊಂಡಿದ್ದು, ಇಬ್ಬರು ವಿದ್ಯಾರ್ಥಿಗಳಲ್ಲಿ ಹೊಸ ಸೋಂಕು ಕಂಡುಬಂದಿರುವುದನ್ನು ವೈದ್ಯರು ಪತ್ತೆ ಹಚ್ಚಿದ್ದಾರೆ.
ತಿರುವನಂತಪುರಂನ ವಿಝಿಂಜಮ್​​ನಲ್ಲಿ 12 ವಿದ್ಯಾರ್ಥಿಗಳನ್ನು ಫುಡ್​ ಪಾಯ್ಸನ್​ ಆಗಿ, ಹೊಟ್ಟೆನೋವು, ವಾಂತಿ, ಬೇಧಿಯಿಂದ ಬಳಲುತ್ತಿದ್ದ ಈ ಇಬ್ಬರನ್ನು ತಪಾಸಣೆಗೊಳಪಡಿಸಲಾಗಿತ್ತು. ಈ ಪೈಕಿ ಇಬ್ಬರು ವಿದ್ಯಾರ್ಥಿಗಳಲ್ಲಿ ಈ ಸೋಂಕು ದೃಢವಾಗಿದೆ.
ಸೋಮವಾರ ವರದಿ ಬಂದಿದ್ದು, ಇದರಲ್ಲಿ ನೊರೊವೈರಸ್​​​ ಇರುವುದು ಪತ್ತೆಯಾಗಿದೆ. ಇದೂ ಕೂಡ ಸಾಂಕ್ರಾಮಿಕ ರೋಗದ ವೈರಸ್​ಗಳೆಂದು ವೈದ್ಯರು ಹೇಳಿದ್ದಾರೆ.
ಸದ್ಯ ಈ ಬಗ್ಗೆ ವರದಿ ನೀಡುವಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​​ ಸೂಚಿಸಿದ್ದು, ನಾಗರಿಕರು ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.ಇದು ಸಾಂಕ್ರಾಮಿಕ ರೋಗವಾಗಿರುವುದರಿಂದ ಅತಿ ವೇಗವಾಗಿ ಹರಡುವ ಸಾಧ್ಯತೆ ಇದ್ದು, ಕೂಡಲೇ ಜನರು ಎಚ್ಚೆತ್ತುಕೊಂಡು ಸಹಕರಿಸಬೇಕೆಂದು ಅವರು ಹೇಳಿದ್ದಾರೆ.(ಏಜೆನ್ಸೀಸ್​)
ಲಡಾಖ್​​ನಲ್ಲೂ ಟ್ರಾಫಿಕ್​ ರೂಲ್ಸ್​​ ಪಾಲಿಸದಿದ್ದರೆ ಬೀಳುತ್ತೆ ದಂಡ : ಈವರೆಗೆ 1.50 ಕೋಟಿ ರೂ. ಸಂಗ್ರಹ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:one × one =
Remember me
