ತಿರುವನಂತಪುರಂ:ದೇಶದಲ್ಲಿ ಕರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಲಾಕ್​ಡೌನ್​ ಮಾಡಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಕೇರಳ ಸರ್ಕಾರ ಈ ಬಗ್ಗೆ ಇಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಜನತಾ ಕರ್ಫ್ಯೂ ಅಥವಾ ವೀಕೆಂಡ್ ಲಾಕ್​ಡೌನ್​ ಮಾಡುವುದಿಲ್ಲ. ಬದಲಿಗೆ ಹಾಟ್​ಸ್ಪಾಟ್​ಗಳಲ್ಲಿ ವ್ಯಾಪಕವಾದ ಕರೊನಾ ಪರೀಕ್ಷೆಗಳನ್ನು ಮಾಡುತ್ತೇವೆ ಎಂದು ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಪಿ ಜಾಯ್ ಅವರು ತಿಳಿಸಿದ್ದಾರೆ. ಇಂದು ನಡೆದ ಉನ್ನತ ಮಟ್ಟದ ಅಧಿಕಾರ ಸಮಿತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಜಾಯ್ ಅವರು ತಿಳಿಸಿದ್ದಾರೆ.
ಸ್ಥಳೀಯಾಡಳಿತಗಳ ಸಹಕಾರದೊಡನೆ ಪಾಸಿಟಿವ್ ಪ್ರಮಾಣವನ್ನು ನೋಡಿಕೊಂಡು ಕರೊನಾ ಪರೀಕ್ಷೆಗಳನ್ನು ವ್ಯಾಪಕವಾಗಿ ಮಾಡಲಾಗುತ್ತದೆ. ಇದರಿಂದ ಕರೊನಾ ತಡೆಗಟ್ಟಬಹುದು ಎಂದು ಅವರು ಹೇಳಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಹರಡುತ್ತಿರುವ ಕರೊನಾದ ಯಾವ ರೂಪಾಂತರ ಕಾರಣ ಎಂಬುದನ್ನು ಪತ್ತೆ ಹಚ್ಚಲು ವೈಜ್ಞಾನಿಕ ಸಮಿತಿ ರಚಿಸಲಾಗಿದೆ ಎಂದು ವಿಪಿ ಜಾಯ್ ತಿಳಿಸಿದ್ದಾರೆ.
“ಯಾವುದೇ ರಾಜ್ಯವೂ ಸಂಪೂರ್ಣ ಲಾಕ್‌ಡೌನ್‌ ವಿಧಿಸುವುದಿಲ್ಲ”

ಕೇಜ್ರಿವಾಲ್​ ಪತ್ನಿಗೆ ಕರೊನಾ ಸೋಂಕು; ಕ್ವಾರಂಟೈನ್​ಗೆ ಒಳಗಾದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
