ತಿರುವನಂತಪುರಂ (ಕೇರಳ):ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುಜರಾತ್​ ಮೂಲದ ಉದ್ಯಮಿ ಅದಾನಿ ಸಮೂಹದ ಕಂಪನಿಗೆ ಗುತ್ತಿಗೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಕೇರಳ ಸರ್ಕಾರ ಮಂಗಳವಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ.
ಕೇರಳದ ಹೈಕೋರ್ಟ್​ ಕಳೆದ ತಿಂಗಳು ಅರ್ಜಿಯನ್ನು ತಿರಸ್ಕರಿಸಿದ ಬಳಿಕ ಸುಪ್ರೀಂ ಮೊರೆ ಹೋಗಲು ಸರ್ಕಾರ ಮುಂದಾಗಿದ್ದು, ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಲು ಸರ್ವಪಕ್ಷಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದನ್ನೂ ಓದಿ:ಪ್ರತಿಯೊಬ್ಬ ನಾಗರಿಕನಿಗೂ ಕರೊನಾ ಲಸಿಕೆ ತಲುಪಿಸುವುದು ನಮ್ಮ ರಾಷ್ಟ್ರೀಯ ಬದ್ಧತೆ: ಪ್ರಧಾನಿ ಮೋದಿ
ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿ ವ್ಯಕ್ತಿಗೆ ಮಾರಾಟ ಮಾಡುವ ಸರ್ಕಾರದ ನಿರ್ಧಾರ ಹಗಲು ದರೋಡೆಯಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೇರಳ ಸಚಿವ ಕಡಂಪಲ್ಲಿ ಸುರೇಂದ್ರನ್​ ಕಿಡಿಕಾರಿದ್ದು, ವಿಮಾನ ನಿಲ್ದಾಣಕ್ಕಾಗಿ ಜಮೀನು ಸೇರಿದಂತೆ ರಾಜ್ಯ ಎಲ್ಲವನ್ನು ಮಾಡಿದೆ ಎಂದಿದ್ದಾರೆ.
ಈಗಾಗಲೇ ಕರ್ನಾಟಕದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್​ ಗುತ್ತಿಗೆ ಪಡೆದುಕೊಂಡಿದೆ. ಖಾಸಗೀಕರಣ ಪ್ರಕ್ರಿಯೆ ಭಾಗವಾಗಿ ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃಧಿಯ ಗುತ್ತಿಗೆಯನ್ನು ಅದಾನಿ ಗ್ರೂಪ್​ ಪಡೆದಿದೆ. ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್, ವಲಸೆ ಮತ್ತು ಭದ್ರತಾ ಸೇವೆಗಳನ್ನು ಒದಗಿಸುವ ಬಗ್ಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಅದಾನಿ ಸಮೂಹದ ಮೂರು ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ.(ಏಜೆನ್ಸೀಸ್​)
31ರಂದು ಮಂಗಳೂರು ವಿಮಾನ ನಿಲ್ದಾಣ ಅದಾನಿಗೆ ಹಸ್ತಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 9 =
Remember me
