ಕೇರಳ: ದೇವರ ನಾಡು ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಸಂಪೂರ್ಣ ನಿಯಂತ್ರಣದಲ್ಲಿ ಇದೆ ಎಂದು ಕೇರಳ ರಾಜ್ಯ ಸರ್ಕಾರ ಹೇಳಿದೆ. ಕೇರಳ ರಾಜ್ಯಾದ್ಯಂತ 24×7 ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದ್ದು, ರಾಜ್ಯಾದ್ಯಂತ 19 ತಂಡಗಳು ಸಕ್ರಿಯವಾಗಿದ್ದವು. ನಿಫಾ ವೈರಸ್ ಸೋಂಕಿನ ನಿಗ್ರಹಕ್ಕೆ ಇರುವ ಎಲ್ಲಾ ಮಾರ್ಗಸೂಚಿಗಳನ್ನೂ ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಹೀಗಾಗಿ, ವೈರಾಣು ಹರಡುವಿಕೆ ಕೇರಳದಲ್ಲಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ.
ಕೇರಳದ ಕೋಝಿಕ್ಕೋಡ್​​​ನ ಸೆಪ್ಟೆಂಬರ್ 16 ರಿಂದ ಇಲ್ಲಿಯವೆರೆಗೂ ಯಾವುದೇ ನಿಫಾ ವೈರಸ್​​ ಪ್ರಕರಣಗಳು, ಪತ್ತೆಯಾಗದ ಹಿನ್ನೆಲೆಯಲ್ಲಿ ಇದೀಗ ಕೆಲವೊಂದಿಷ್ಟು ಜಾಗಗಳ ಪ್ರದೇಶಕ್ಕೆ ಹೇರಿದ್ದ ನಿರ್ಬಂಧವನ್ನ ಹಿಂಪಡೆದಿದೆ.
ಫೇಸ್‌ಬುಕ್ ಪೋಸ್ಟ್‌ನಲ್ಲಿ ಕೇರಳದ ಕೋಝಿಕ್ಕೋಡ್​​​ನ ಜಿಲ್ಲಾಧಿಕಾರಿ ಎ ಗೀತಾ ಅವರು ಕಂಟೈನ್‌ಮೆಂಟ್ ವಲಯಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲೆಗಳನ್ನು ತೆರೆಯಲಾಗುವುದು ಮತ್ತು ತರಗತಿಗಳು ಬುಧವಾರದಿಂದ ಪ್ರಾರಂಭವಾಗಲಿದೆ. ಆದರೆ ಜನರು, ಸೋಂಕಿನ ವಿರುದ್ಧ ಜಾಗರೂಕರಾಗಿರಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಮತ್ತು ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಒತ್ತಾಯಿಸಿದ್ದಾರೆ.
ಈವರೆಗೆ ಕೇರಳ ರಾಜ್ಯದಲ್ಲಿ 6 ನಿಫಾ ವೈರಸ್ ಸೋಂಕಿತರು ಪತ್ತೆಯಾಗಿದ್ದಾರೆ. ವೈರಾಣು ಹರಡುವಿಕೆ ಕೇರಳದಲ್ಲಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದು ಆರೋಗ್ಯ ಸಚಿವೆ ವೀಣಅ ಜಾರ್ಜ್​​ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fourteen =
Remember me
