ತಿರುವನಂತಪುರ:ರಾಜ್ಯದಲ್ಲಿ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯಲು ಕೇರಳ ಸರ್ಕಾರ ಬುಧವಾರ ನಿರ್ಧರಿಸಿದೆ.
ಮಹಾರಾಷ್ಟ್ರ ಸರ್ಕಾರ ಕೆಲ ದಿನಗಳ ಹಿಂದಷ್ಟೆ ಇಂಥ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಸಿಬಿಐ ಕೇರಳದಲ್ಲಿ ಯಾವುದೇ ಪ್ರಕರಣದ ತನಿಖೆ ನಡೆಸಬೇಕಾದರೆ ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ. ವಸತಿಹೀನರಿಗೆ ಮನೆ ಕಟ್ಟಿಕೊಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಲೈಫ್ ಮಿಷನ್’ ಯೋಜನೆಯ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿರುವುದೇ ಈ ಕ್ರಮ ಕೈಗೊಳ್ಳಲು ಕಾರಣ ಎಂದು ಹೇಳಲಾಗಿದೆ.
ಸಿಬಿಐ ಪ್ರಕರಣ ದಾಖಲಿಸಿದ ನಂತರ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟ್ ಮೊರೆ ಹೋಗಿದ್ದು, ಸಿಬಿಐ ತನಿಖೆಗೆ ಎರಡು ತಿಂಗಳ ತಡೆ ನೀಡಲಾಗಿದೆ. ಬಿಜೆಪಿಯೇತರ ಆಡಳಿತದ ರಾಜ್ಯಗಳಾದ ಪಶ್ಚಿಮ ಬಂಗಾಳ, ರಾಜಸ್ಥಾನ ಕೂಡ ಇತ್ತೀಚೆಗೆ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + five =
Remember me
