ವಯನಾಡು:ದೇವರ ನಾಡು ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ಸದ್ಯ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 176ಕ್ಕೆ ಏರಿಕೆಯಾಗಿದೆ.ಹಲವಾರು ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ದುರ್ಘಟನೆ ಸಂಬಂಧ ಕೇರಳ ಸರ್ಕಾರ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದ್ದು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.ಚುರಲ್ಪಾರ, ವೇಲಾರಿಮಲ, ಮುಂಡಕಯಿಲ್ ಮತ್ತು ಪೋತುಕಲು ಪ್ರದೇಶ ಸಂಪೂರ್ಣ ಹಾಳಾಗಿದ್ದು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿಪಡಿಸಿದೆ.
#WATCH| Kerala: Helicopter of the Indian Air Force carries out a rescue operation in the Chooralmala area of Wayanad where a landslide occurred earlier today claiming the lives of over 93 people.pic.twitter.com/3D751Pxpi2
ಇದನ್ನೂ ಓದಿ:ಭಾರತ ಟೂರ್ನಿಯಲ್ಲಿ ಭಾಗಿಯಾಗುವ ವಿಚಾರ ಐಸಿಸಿ ನಿರ್ಧಾರಕ್ಕೆ ಬಿಟ್ಟದ್ದು; ಹೊಸ ವರಸೆ ಶುರು ಮಾಡಿದ ಪಿಸಿಬಿ
ಭೂದುರಂತದಲ್ಲಿ ನಾಪತ್ತೆಯಾದವರ ಸಂಖ್ಯೆಯನ್ನು ಕಂಡುಹಿಡಿಯಲು ಇದೀಗ ಜಿಲ್ಲಾಧಿಕಾರಿಗಳು ಡೇಟಾವನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಎಷ್ಟು ಜನರು ಮಣ್ಣಿನಡಿಯಲ್ಲಿ ಸಿಲುಕಿರಬಹುದು ಎಂಬುದನ್ನು ಸರಿಯಾಗಿ ತಿಳಿಯಲು ಜಿಲ್ಲಾಡಳಿತ ಅಧಿಕಾರಿಗಳು ಹಲವು ರೀತಿಯಲ್ಲಿ ಪ್ರಯತ್ನಿಸುತ್ತಿದ್ದಾರೆ. ತಾತ್ಕಾಲಿಕ ಸೇತುವೆ ಬಳಸಿ ಇಲ್ಲಿಯವರೆಗೆ 1000ಕ್ಕಿಂತ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಿರುವ ಭಾರತೀಯ ಸೇನೆ, ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಸಂತಾಪ ಸೂಚಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಕಾರ್ಯಾಲಯ 2 ಲಕ್ಷ ರೂ. ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರವನ್ನು ಘೋಷಿಸಲಾಗಿದೆ.
#WATCH| Kerala: Relief and rescue operation underway in Wayanad's Chooralmala after a landslide broke out yesterday early morning claiming the lives of 143 people(latest visuals)pic.twitter.com/Cin8rzwAzJ
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen + 11 =
Remember me
