ಬೆಂಗಳೂರು:ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಉತ್ಪನ್ನಗಳನ್ನು ತಮ್ಮ ರಾಜ್ಯದಲ್ಲಿ ಮಾರಾಟ ಮಾಡುವುದನ್ನು ವಿರೋಧಿಸಲು ಕೇರಳ ಸಹಕಾರಿ ಹಾಲು ಮಾರಾಟ ಒಕ್ಕೂಟ ನಿರ್ಧರಿಸಿದೆ.ಮಿಲ್ಮಾ ಮಲಬಾರ್ ವಲಯ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಎಸ್.ಮಣಿ ಈ ಕುರಿತು ಮಾತನಾಡಿ, ಭಾರತೀಯ ರಾಷ್ಟ್ರೀಯ ಸಹಕಾರಿ ಡೈರಿ ಫೆಡರೇಶನ್‌ನ ಮುಂದಿನ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲಾಗುವುದು. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚರ್ಚೆಯಾದ ಅಮುಲ್-ನಂದಿನಿ ಸಮಸ್ಯೆಗೂ ಮುನ್ನವೇ ಕರ್ನಾಟಕ ಹಾಲು ಒಕ್ಕೂಟ ಕೇರಳದಲ್ಲಿ ವ್ಯಾಪಾರ ಮಾಡಲು ನಿರ್ಧರಿಸಿತ್ತು ಎಂದಿದ್ದಾರೆ.ಇದನ್ನೂ ಓದಿ:ಮಳೆ ಸುರಿದ ಬಳಿಕ ಬಿತ್ತನೆ ಕಾರ್ಯ ಆರಂಭಿಸಲು ಕೃಷಿ ಇಲಾಖೆ ಸೂಚನೆ
ಅಲ್ಲದೇ, ಕೇರಳದಲ್ಲಿ ತನ್ನ ಮಳಿಗೆಗಳನ್ನು ತೆರೆಯದಂತೆ ಲಿಖಿತವಾಗಿ ನೀಡಿದ್ದರೂ, ಕರ್ನಾಟಕದವರು ಇದನ್ನು ನಿರ್ಲಕ್ಷಿಸಿದ್ದಾರೆ. ಕರ್ನಾಟಕದಲ್ಲಿ ಉದ್ಯಮ ಆರಂಭಿಸುವ ಅಮುಲ್ ನಿರ್ಧಾರ ತಪ್ಪು, ಆದರೆ ಅದನ್ನು ವಿರೋಧಿಸುವ ನೈತಿಕ ಹಕ್ಕು ನಂದಿನಿ ಅವರಿಗೆ ಇಲ್ಲ ಎಂದು ಮಣಿ ಹೇಳಿದ್ದಾರೆ.
ಹಾಲು ಒಕ್ಕೂಟಗಳು ಕೇವಲ ವಾಣಿಜ್ಯ ಹಿತಾಸಕ್ತಿಗಳಿಗಾಗಿ ಮಾತ್ರವಲ್ಲದೆ ತಮ್ಮ ರಾಜ್ಯದ ಹೈನುಗಾರರ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕು. ಒಂದು ರಾಜ್ಯದ ಸಹಕಾರಿ ಸಂಸ್ಥೆಯು ಮತ್ತೊಂದು ರಾಜ್ಯದ ಸಹಕಾರಿ ಸಂಸ್ಥೆಯ ಮಾರುಕಟ್ಟೆಯಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುವುದು ಸಹಕಾರದ ತತ್ವಗಳು ಮತ್ತು ಮೂಲಭೂತ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಕೆಎಸ್ ಮಣಿ ತಿಳಿಸಿದ್ದಾರೆ.ಮಿಲ್ಮಾ ಮುಖ್ಯವಾಗಿ ಕರ್ನಾಟಕದ ನಂದಿನಿ ಮತ್ತು ತಮಿಳುನಾಡಿನ ಆವಿನ್ ಹಾಲಿನ ಉತ್ಪನ್ನಗಳನ್ನು ಕೇವಲ ಹಬ್ಬದ ಋತುಗಳಲ್ಲಿ ಮತ್ತು ಕೇರಳದಲ್ಲಿ ಹಾಲು ಉತ್ಪಾದನೆ ಕಡಿಮೆಯಾದಾಗ ಮಾತ್ರ ಅವಲಂಬಿಸಿದೆ. ನಂದಿನಿಯ ಮಿಲ್ಮಾ ಸಂಸ್ಥೆಗೆ ತೊಂದರೆ ನೀಡುವುದು ಸರಿಯಲ್ಲ ಎಂದು ಮಣಿ ಹೇಳಿದರು.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:10 + 10 =
Remember me
