ತಿರುವನಂತಪುರಂ:ಕೇರಳದ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯದಲ್ಲಿ (ಕುಸಾಟ್) ಆಯೋಜನೆಗೊಂಡಿದ್ದ ಟೆಕ್ ಫೆಸ್ಟ್‌ನಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಕಾಲ್ತುಳಿತದಿಂದ ಮೃತಪಟ್ಟಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಖ್ಯಾತ ಗಾಯಕಿ ನಿಕಿತಾ ಗಾಂಧಿ ಅವರ ಕಾನ್ಸರ್ಟ್​ ವೇಳೆ ಕಾಲ್ತುಳಿತ ಸಂಭವಿಸಿದ್ದು, ಮಳೆ ಸುರಿದ ಪರಿಣಾಮ ಹಲವರು ಆಡಿಟೋರಿಯಂ ಬಳಿ ಓಡಿ ಬಂದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆಯಲ್ಲಿ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳು ಈ ದುರಂತದಲ್ಲಿ ಸಾವಿಗೀಡಾಗಿದ್ದಾರೆ. ಮೂವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 15 ಮಂದಿಗೆ ಪ್ರಜ್ಞೆ ಕಳೆದುಕೊಂಡಿದ್ದಾರೆ. 40ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ನಾಲ್ವರು ವಿದ್ಯಾರ್ಥಿಗಳ ಮೃತದೇಹಗಳನ್ನು ಕಳಮಶ್ಳೇರಿ ಮೆಡಿಕಲ್ ಕಾಲೇಜಿನಲ್ಲಿ ಇರಿಸಲಾಗಿದೆ.
Kerala | Stampede-like situation at CUSAT University in Kochi. Four students dead and many injured as per Health Minister Veena George. The accident took place during a music concert by Nikhita Gandhi that was held in the open-air auditorium on the campus. Arrangements have been…
ಇದನ್ನೂ ಓದಿ:ನ. 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ; ಈ ದಾಖಲೆಗಳನ್ನು ನಿಮ್ಮ ಜತೆ ಕೊಂಡೊಯ್ಯುವುದು ಅತ್ಯಗತ್ಯ
ಶನಿವಾರ ಟೆಕ್​​ಫೆಸ್ಟ್​ನ ಸಮಾರೋಪ ದಿನವಾಗಿದ್ದು, ಮ್ಯೂಸಿಕ್​ ಕಾನ್ಸರ್ಟ್​ ಆಯೋಜಿಸಲಾಗಿತ್ತು. ಮಳೆ ಆರಂಭವಾಗುತ್ತಿದ್ದಂತೆ ಹೊರಗಿನವರೂ ಸೇರಿದಂತೆ ಹಲವರು ಸಭಾಂಗಣಕ್ಕೆ ನುಗ್ಗಿದರು. ಈ ನಡುವೆ ಅವಸರದಲ್ಲಿ ಮೆಟ್ಟಿಲುಗಳಿಂದ ಕೆಳಗೆ ಬಿದ್ದ ವಿದ್ಯಾರ್ಥಿಗಳ ಮೇಲೆ ಇತರರು ತುಳಿದು ಓಡಿದ್ದಾರೆ. ಕ್ಯಾಂಪಸ್‌ನ ಬಯಲು ಸಭಾಂಗಣದಲ್ಲಿ ಈ ದುರಂತ ಸಂಭವಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವೆ ವೀಣಾ ಜಾರ್ಜ್, ಮೃತರ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ.  ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಟರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಕಳಮಶ್ಶೇರಿ ವೈದ್ಯಕೀಯ ಕಾಲೇಜಿಗೆ 46 ಜನರನ್ನು ದಾಖಲಿಸಲಾಗಿದೆ, ಅವರಲ್ಲಿ 15 ಮಂದಿ ವಾರ್ಡ್‌ನಲ್ಲಿ ನಿಗಾದಲ್ಲಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
#WATCH| Kerala | Four students died and several were injured in a stampede at CUSAT University in Kochi. The accident took place during a music concert by Nikhita Gandhi that was held in the open-air auditorium on the campus. Arrangements have been made at the Kalamassery…pic.twitter.com/FNvHTtC8tX
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 4 =
Remember me
