ಎರ್ನಾಕುಲಂ:ಜ್ವರದಿಂದ ಬಳಲುತ್ತಿರುವ ಮಗುವಿಗೆ ರೇಬೀಸ್ ಲಸಿಕೆ ನೀಡಿದ ಆರೋಪದ ಕೇಳಿ ಬಂದಿರುವ ಘಟನೆ ಕೇರಳದ ಎರ್ನಾಕುಲಂ ಸಮೀಪದ ಅಂಗಮಲ್ಲಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ಏಳು ವರ್ಷದ ಮಗುವಿನ ರಕ್ತ ಪರೀಕ್ಷೆಗಾಗಿ ಪ್ರಯೋಗಾಲಯದ ಮುಂದೆ ಕುಳಿತಿದ್ದ ವೇಳೆ ಶುಕ್ರವಾರದಂದು ಈ ಘಟನೆ ನಡೆದಿದ್ದು, ಏಳು ವರ್ಷದ ಬಾಲಕಿಯ ಪ್ರಿಸ್ಕ್ರಿಪ್ಷನ್ ಅನ್ನು ಪರಿಶೀಲಿಸದೆ ನರ್ಸ್ ಚುಚ್ಚುಮದ್ದನ್ನು ನೀಡಿದ್ದಳು. ಮಗುವಿಗೆ ಯಾವುದೇ ವೈದ್ಯಕೀಯ ತೊಂದರೆಗಳಿಲ್ಲ ಎಂದು ವೈದ್ಯರು ತಿಳಿಸಿರುವುದರಿಂದ ಪೊಲೀಸ್ ತನಿಖೆಗೆ ಒತ್ತಾಯಿಸುವುದಿಲ್ಲ ಎಂದು ಮಗುವಿನ ತಾಯಿ ಅಂಜಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಪ್ರವಾಸ ಮುಗಿಸಿ ಮನೆಗೆ ಬಂದ ಮಹಿಳೆ: ಶೌಚಲಯದಲ್ಲಿ ಹಾವು ನೋಡಿ ಕಂಗಾಲು
ಆದರೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಸರ್ಕಾರ, ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಸೇವೆಯನ್ನು ವಜಾಗೊಳಿಸಲು ಕೇರಳ ಸರಕಾರ ನಿರ್ಧರಿಸಿದೆ. ಅಲ್ಲದೇ ಈ ಕುರಿತು ತನಿಖೆಗೆ ಆದೇಶಿಸಿ ರಾಜ್ಯ ಆರೋಗ್ಯ ಇಲಾಖೆ ಸೂಚಿಸಿದೆ. ಮಗುವಿನ ಪೋಷಕರು ಬಿಲ್​ ಪಾವತಿಸಲು ಹೋದ ಸಂದಂರ್ಭದಲ್ಲಿ, ಮಗು ಏಕಾಂಗಿಯಾಗಿ ಕಾಯುತ್ತಿತ್ತು. ಈ ವೇಳೆ ನರ್ಸ್​ ಆಂಟಿ ರೇಬಿಸ್ ಲಸಿಕೆಗಾಗಿ ಕಾಯುತ್ತಿರುವ ಮತ್ತೊಂದು ಮಗು ಎಂದು ತಪ್ಪಾಗಿ ಗ್ರಹಿಸಿ ಲಸಿಕೆ ನೀಡಿರಬಹುದು ಎಂದು ಹೇಳಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಪೊಲೀಸರು. ನಾವು ಪೋಷಕರ ಹೇಳಿಕೆಯನ್ನು ಪಡೆದಿದ್ದೇವೆ. ಅವರು ವೈದ್ಯರೊಂದಿಗೆ ಸಮಾಲೋಚಿಸಿದ್ದಾರೆ. ರೇಬೀಸ್ ಲಸಿಕೆ ತೆಗೆದುಕೊಳ್ಳುವುದರಿಂದ ಯಾವುದೇ ಅಡ್ಡ ಪರಿಣಾಮಗಳಿಲ್ಲದ ಕಾರಣ, ಅವರು ದೂರು ದಾಖಲಿಸದಿರಲು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ, ಮಗುವನ್ನು ನಿಗಾದಲ್ಲಿ ಇರಿಸಲಾಗಿದ್ದು, ಆಕೆಯ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − fourteen =
Remember me
