ತಿರುವನಂತಪುರಂ:ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು (ಮಂಗಳವಾರ) ಕೇರಳದ ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಇದನ್ನೂ ಓದಿ:ಅಂಬೇಡ್ಕರ್‌ ಇಲ್ಲದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ: ಪ್ರಧಾನಿ ಮೋದಿ
ಮೇ 22 ರಂದು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ. ಕೇರಳದ ರಾಜಧಾನಿ ತಿರುವನಂತಪುರಂ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.
ಕೇರಳದ ಉತ್ತರ ಭಾಗದ ಆರು ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಪಾಲಕ್ಕಾಡ್, ಕೋಯಿಕ್ಕೋಡ್, ಕಣ್ಣೂರು, ಮಲಪ್ಪುರಂ, ವಯನಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಯು ಅಪಾಯಗಳನ್ನು ಉಂಟುಮಾಡುವ ಕಾರಣ, ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಜನರಿಗೆ ಎಚ್ಚರದಿಂದ ಇರಲು ಸಲಹೆ ನೀಡಿದೆ.
ರೆಡ್ ಅಲರ್ಟ್ 24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚು ಭಾರೀ ಮಳೆಯನ್ನು ಸೂಚಿಸುತ್ತದೆ. ಆದರೆ, ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ.ನಿಂದ 20 ಸೆಂ.ಮೀ.ವರೆಗಿನ ಅತಿ ಭಾರೀ ಮಳೆ, ಹಳದಿ ಅಲರ್ಟ್ ಎಂದರೆ 6 ಸೆಂ.ಮೀ ಮತ್ತು 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ.
ಇಂದು ಬೆಳಿಗ್ಗೆ 9.30ರ ಸುಮಾರಿಗೆ ತಿರುವನಂತಪುರದ ಪೋತೆನ್‌ಕೋಡ್‌ನಲ್ಲಿ ಮಹಿಳೆಯೊಬ್ಬರು ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ತೋಯ್ದು ಹಳೆ ಗೋಡೆ ಕುಸಿದು ಬಿದ್ದಿದ್ದು, ಇಡತ್ತಾರ ವಾರ್ಡ್‌ನ ಚುಮಡುತಂಗಿ ವಿಳದ ಶ್ರೀಕಲಾ (61) ಎಂಬುವರ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಆಕೆಯನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.
ಕೇರಳಕ್ಕೆ ಆಗಮಿಸುವ ಪ್ರವಾಸಿಗರಿಗೆ ಮಳೆಯ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಲು ವಿಶೇಷ ನಿರ್ದೇಶನಗಳನ್ನು ನೀಡಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ಹೇಳಿದ್ದಾರೆ. ಭೂ ಕುಸಿತದ ಭೀತಿಯ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ನಿಯಮಗಳ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಹಾಗೂ ಅಗತ್ಯ ಬಿದ್ದರೆ ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ ಪ್ರಯಾಣ ನಿಷೇಧ ಹೇರುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ.
ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
