ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶವನ್ನುದ್ಧೇಶಿಸಿ ಮಾತನಾಡಿದ್ದಾರೆ. ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗಿರುವುದು ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ.
ತಾವು ಗೈರುಹಾಜರಾಗಿರುವ ಕುರಿತು ಸ್ಪಷ್ಟನೆ ನೀಡಿದ ಖರ್ಗೆ ಕಣ್ಣಿನ ಸಂಬಂಧಿತ ಸಮಸ್ಯೆ ಹಾಗೂ ಭದ್ರತೆಯ ಕಾರಣದಿಂದಾಗಿ ತಾವು ಕಾರ್ಯಕ್ರಮ ತಪ್ಪಿಸಿಕೊಂಡಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ:VIDEO| ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದವನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು
ಎಐಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಈ ಕುರಿತು ಮಾತನಾಡಿದ ಖರ್ಗೆ ಮೊದಲನೆಯದಾಗಿ ನನಗೆ ಸ್ವಲ್ಪ ಕಣ್ಣಿನ ಸಮಸ್ಯೆಗಳಿವೆ. ಎರಡನೇಯದಾಗಿ ಶಿಷ್ಟಾಚಾರದ ಪ್ರಕಾರ 9:20ಕ್ಕೆ ನಾನು ನನ್ನ ನಿವಾಸದಲ್ಲಿ ಧ್ವಜಾರೋಹಣ ಮಾಡಿದ ನಂತರ ಕಾಂಗ್ರೆಸ್​ ಕಚೇರಿಗೆ ತೆರಳಬೇಕಿತ್ತು.
ಕೆಂಪುಕೋಟೆಯಲ್ಲಿನ ಭದ್ರತೆಯ ಕಾರಣದಿಂದಾಗಿ ನಾನು ಇಂದು ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ. ಪ್ರಧಾನಿ ಭಾಷಣ ಮುಗಿದು ಅವರು ನಿರ್ಗಮಿಸಿದ ಬಳಿಕ ಬೇರೆಯವರನ್ನು ಹೊರಬಿಡುತ್ತಾರೆ. ಆಗಾಗಿ ನಾನು ಸಮಯಕ್ಕೆ ಸರಿಯಾಗಿ ಹಾಜರಾಗುವುದಿಲ್ಲ ಎಂಬ ಕಾರಣಕ್ಕೆ ಕೆಂಪುಕೋಟೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಗೈರಾಗಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
When Loksabha Opposition leader suspended..When MPs are suspended for indefinite period…When Opposition leaders speeches expunged if we mention Adani .When Mikes are switched off ..What’s else we can do ?We celebrate#IndependenceDaywith people.https://t.co/k7Y9PK0eIi
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
