ಚೆನ್ನೈ:ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವಕ್ಕೆ ಇತ್ತೀಚೆಗಷ್ಟೇ ರಾಜೀನಾಮೆ ನೀಡಿದ್ದ ಬಿಜೆಪಿಯ ನಟಿ ಖುಷ್ಬೂ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯಾಧ್ಯಕ್ಷೆಯಾಗಿ ನೇಮಕ ಮಾಡುವ ಸಾಧ್ಯತೆ ಇದೆ. ಪಕ್ಷದ ನಾಯಕತ್ವ ಈಗಾಗಲೇ ಈ ಸಂಬಂಧ ನಿರ್ಧಾರ ಕೈಗೊಂಡಿದ್ದು, ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಓಟಿಟಿಗೆ ಬಂತು ‘ಕಲ್ಕಿ’: ಸ್ಟ್ರೀಮ್ ಆಗಲಿದೆ ಕನ್ನಡ ಆವೃತ್ತಿ! ಎಲ್ಲಿ?ಯಾವಾಗ? ಮಾಹಿತಿ ಇಲ್ಲಿದೆ..
ಪ್ರಸ್ತುತ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಅಣ್ಣಾಮಲೈ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ರಾಜಕೀಯ ವಿಜ್ಞಾನ ಅಧ್ಯಯನಕ್ಕಾಗಿ ಮುಂದಿನ ತಿಂಗಳು ಲಂಡನ್‌ಗೆ ತೆರಳುತ್ತಿದ್ದಾರೆ. ಅವರು ಮುಂದಿನ ಆರು ತಿಂಗಳ ಕಾಲ ಲಂಡನ್‌ನಲ್ಲಿ ಇರುತ್ತಾರೆ. ಅವರು ಲಂಡನ್‌ಗೆ ಹೋದರೂ ರಾಜ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದು, ಅವರ ಸ್ಥಾನಕ್ಕೆ ಹೊಸಬರನ್ನು ನೇಮಿಸುವ ಸಾಧ್ಯತೆ ಇಲ್ಲ. ಆದರೆ, ಪಕ್ಷದ ನಾಯಕರ ಜತೆ ಆಗಾಗ ವಿಡಿಯೋ ಕಾನ್ಫರೆನ್ಸ್ ನಡೆಸುವ ಮೂಲಕ ಅಣ್ಣಾಮಲೈ ಪಕ್ಷದ ಚಟುವಟಿಕೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.
ಇನ್ನು ಅಣ್ಣಾಮಲೈ ಅನುಪಸ್ಥಿತಿಯಲ್ಲಿ ಬಿಜೆಪಿ ನಾಯಕತ್ವವು ಚಟುವಟಿಕೆಗಳನ್ನು ಸುಗಮವಾಗಿ ನಡೆಸಲು ಪರ್ಯಾಯ ಮಾರ್ಗಗಳನ್ನು ಹುಡುಕಿದ್ದು, ಕಾರ್ಯಾಧ್ಯಕ್ಷರನ್ನಾಗಿ ಎಲ್ಲ ಸಮುದಾಯಗಳನ್ನು ಕರೆದೊಯ್ಯಬಲ್ಲ ವ್ಯಕ್ತಿಯನ್ನು ನೇಮಿಸಲು ಬಿಜೆಪಿ ರಾಷ್ಟ್ರೀಯ ಸಮಿತಿಯು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಹೀಗಾಗಿಯೇ ಖುಷ್ಬೂರನ್ನು ಕಾರ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆ ಈಗ ಹೆಚ್ಚಾಗಿದೆ. ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆಗಳು ಹಾಗೂ ಸಹಕಾರಿ ಸಂಘಗಳ ಚುನಾವಣಾ ಕಾರ್ಯತಂತ್ರ ರೂಪಿಸುವ, ಸದಸ್ಯತ್ವ ಪ್ರಚಾರ ಕಾರ್ಯಕ್ರಮಗಳ ನಿರ್ವಹಣೆಯ ಹೊಣೆಗಾರಿಕೆಯನ್ನು ಕಾರ್ಯಾಧ್ಯಕ್ಷರಿಗೆ ವಹಿಸಲು ಪಕ್ಷ ನಿರ್ಧರಿಸಿದೆ ಎಂದು ವರದಿಯಾಗಿದೆ.
ಬಿಹಾರದಲ್ಲಿ ಮೂರನೇ ಬಾರಿಗೆ ಕುಸಿದ ಸೇತುವೆ..ವೀಡಿಯೋ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 5 =
Remember me
