ಕಾನ್ಪುರ:ಉತ್ತರ ಪ್ರದೇಶದಲ್ಲಿ ಜನರನ್ನು ಅಪಹರಿಸಿ ಒತ್ತೆಹಣಕ್ಕೆ ಬೇಡಿಕೆ ಇಡುವುದು ಹೊಸತೇನಲ್ಲ. ದಿನಕ್ಕೆ ಒಂದಲ್ಲ ಒಂದು ಇಂಥ ಘಟನೆಗಳು ವರದಿಯಾಗುತ್ತಲೇ ಇರುತ್ತವೆ. ಆದರೆ, ಒತ್ತೆಹಣ ಸಿಕ್ಕ ಬಳಿಕ ದುಷ್ಕರ್ಮಿಗಳು ಒತ್ತೆಯಾಳನ್ನು ಬಿಟ್ಟು ಕಳುಹಿಸುತ್ತಾರೆ. ಇಲ್ಲವಾದರೆ ಕನಿಷ್ಠ ಅವರ ಶವವಾದರೂ ಸಿಗುತ್ತದೆ.
ಆದರೆ ಈ ಪ್ರಕರಣದಲ್ಲಿ ದುಷ್ಕರ್ಮಿಗಳು ತಮ್ಮ ಕಣ್ಣೆದುರೇ ಒತ್ತೆಹಣವನ್ನು ಕೊಂಡೊಯ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ. ಅಷ್ಟೇ ಅಲ್ಲ, ಹಣ ಕೊಂಡೊಯ್ದರೂ ಅಪಹರಣಕಾರರು ಒತ್ತೆಯಾಳನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಕೂಡ ಆತನನ್ನು ಪತ್ತೆ ಮಾಡಿಲ್ಲ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ಅಪಹರಣಕ್ಕೆ ಒಳಗಾಗಿರುವ ವ್ಯಕ್ತಿಯ ಮನೆಯವರು ದೂರಿದ್ದಾರೆ.
ಲ್ಯಾಬ್​ ಟೆಕ್ನೀಷಿಯನ್​ ಆಗಿ ಕೆಲಸ ಮಾಡುತ್ತಿದ್ದ ಎಸ್​. ಯಾದವ್​ ಎಂಬಾತನನ್ನು ದುಷ್ಕರ್ಮಿಗಳು ಅಪಹರಿಸಿದ್ದರು. ಆತನ ಸುರಕ್ಷಿತ ಬಿಡುಗಡೆಗೆ 30 ಲಕ್ಷ ರೂಪಾಯಿ ಒತ್ತೆಹಣಕ್ಕೆ ಅಪಹರಣಕಾರರು ಬೇಡಿಕೆ ಇಟ್ಟಿದ್ದರು. ಹಣವನ್ನು ರೈಲ್ವೆ ಹಳಿಯ ಮೇಲೆ ಎಸೆಯಬೇಕು ಎಂದು ಸೂಚಿಸಿದ್ದರು.
ಇದನ್ನೂ ಓದಿ:ಯಾವ ರೈತ ಫೋಟೋಶೂಟ್​ ಮಾಡಿಸ್ಕೋತಾನೆ … ಸಲ್ಮಾನ್​ಗೆ ಟ್ರೋಲಿಗರ ಪ್ರಶ್ನೆ?
ಅಪಹೃತನ ಮನೆಯವರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಎಫ್​ಐಆರ್​ ದಾಖಲಿಸಿಕೊಂಡಿದ್ದ ಪೊಲೀಸರು ಒತ್ತೆಯಾಳಿನ ಪತ್ತೆಗೆ ಪ್ರಯತ್ನ ಮಾಡುತ್ತಿದ್ದರು. ಒತ್ತೆಹಣ ಕೊಂಡೊಯ್ಯಲು ಬಂದಾಗ ದುಷ್ಕರ್ಮಿಗಳನ್ನು ಹಿಡಿಯಲು ಯೋಜಿಸಿದ್ದರು. ಆದರೆ ಅವರ ಈ ಯೋಜನೆ ಕೈಕೊಟ್ಟಿತು. ಅವರ ಕಣ್ಣೆದುರೇ ದುಷ್ಕರ್ಮಿಗಳು ಒತ್ತೆಹಣವನ್ನು ಕೊಂಡೊಯ್ದಿದ್ದಾರೆ. ದುಷ್ಕರ್ಮಿಗಳನ್ನು ಹಿಡಿಯಲು ಅವರಿಗೆ ಸಾಧ್ಯವಾಗಿಲ್ಲ. ಒತ್ತೆಯಾಳು ಕೂಡ ಬಿಡುಗಡೆಯಾಗಿಲ್ಲ.ಈ ಹಿನ್ನೆಲೆಯಲ್ಲಿ ಅಪಹೃತನ ಕುಟುಂಬದವರು ಪೊಲೀಸ್​ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದು, ದುಷ್ಕರ್ಮಿಗಳು ಹಣ ಕೊಂಡೊಯ್ಯುವಾಗ ಪೊಲೀಸರು ಬೇಕೆಂದೇ ಅಸಹಾಯಕರಾಗಿ ನಿಂತಿದ್ದರು ಎಂದು ಆರೋಪಿಸಿದ್ದಾರೆ.
ಪೊಲೀಸ್​ ಸಿಬ್ಬಂದಿ ಹೇಳಿದ್ದಕ್ಕೆ ಕಷ್ಟಪಟ್ಟು 30 ಲಕ್ಷ ರೂ. ಹಣ ಹೊಂದಿಸಿ, ರೈಲು ಹಳಿ ಮೇಲೆ ಹಾಕಿದ್ದೆವು. ಅದನ್ನು ಕೊಂಡೊಯ್ಯಲು ಬಂದರೂ ಪೊಲೀಸರು ದುಷ್ಕರ್ಮಿಗಳನ್ನು ಹಿಡಿಯಲು ಮುಂದಾಗಲಿಲ್ಲ. ಜತೆಗೆ ಒತ್ತೆಯಾಳು ಕೂಡ ಬಿಡುಗಡೆಯಾಗಿಲ್ಲ. ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಆದರೆ ಅಪಹೃತನ ಕುಟುಂಬದವರ ಈ ಆರೋಪವನ್ನು ತಳ್ಳಿಹಾಕಿರುವ ಪೊಲೀಸರು, ಅದರಲ್ಲಿ ಸತ್ಯ ಇಲ್ಲ. ನಾವು ಕೂಡ ಅಪಹೃತನ ಪತ್ತೆಗಾಗಿ ಶ್ರಮಿಸುತ್ತಿದ್ದೇವೆ. ಆದರೂ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
14 ದಿನದಲ್ಲಿ ಆತ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಲಾಗಿದೆ. ಆತ ಅದೆಂಥ ತಪ್ಪು ಮಾಡಿದ್ದಾನೆ ಗೊತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × five =
Remember me
