ಕಲ್ಕತ್ತ; ಯಾಸ್ ಚಂಡಮಾರುತ ಪಶ್ಚಿಮ ಬಂಗಾಳ ಹಾಗೂ ಒಡಿಶಾ ಮೇಲೆ ದಾಂಗುಡಿ ಇಡುತ್ತಿರುವುದರಿಂದ ಆ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೆ ಕಲ್ಕತ್ತ ವಿಮಾನ ನಿಲ್ದಾಣದಲ್ಲಿ ಎಲ್ಲ ವಿಮಾನ ಸಂಚಾರಗಳನ್ನು ರದ್ದುಗೊಳಿಸಲಾಗಿದೆ.
ಕಲ್ಕತ್ತ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಈ ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಯಾಸ್ ಚಂಡಮಾರುತ ಸೃಷ್ಟಿಯಾಗಿದೆ. ಇದರಿಂದ ಗಂಟೆಗೆ 155 ಕಿಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆ ಇದ್ದು ತೀರ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದೆ‌.
ಪಶ್ಚಿಮ ಬಂಗಾಳದಲ್ಲಿ ಸುಮಾರು 11 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಇದನ್ನೂ ಓದಿ;ಆಕಾಶ ನೋಡಲು ರೆಡಿಯಾಗಿ: ಸೂಪರ್‌ಮೂನ್, ರೆಡ್‌ಮೂನ್, ಚಂದ್ರಗ್ರಹಣ ಎಲ್ಲಾ ಒಂದೇ ದಿನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 13 =
Remember me
